Gl jewellers
ನಿಧನ

ಕಾಡಾನೆ ದಾಳಿಗೆ ಮಹಿಳೆ ಮೃತ್ಯು!

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಕೋಗೋಡು ಸುಶೀಲಮ್ಮ (60 ) ಮೃತರು

ಈ ಸುದ್ದಿಯನ್ನು ಶೇರ್ ಮಾಡಿ

ಬೇಲೂರು(ಹಾಸನ): ತಾಲೂಕಿನ ಕೋಗೋಡು ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಕೋಗೋಡು ಸುಶೀಲಮ್ಮ (60 ) ಮೃತರು.

Papemajalu garady
Karnapady garady

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸುಶೀಲಮ್ಮ ಮೇಲೆ ಏಕಾಏಕಿ ದಾಳಿ ಮಾಡಿದ ಕಾಡಾನೆ ಸೊಂಡಿಲಿನಿಂದ ಎತ್ತಿ ಬಿಸಾಡಿ, ತಲೆ ಭಾಗವನ್ನು ತುಳಿದು ಸಾಯಿಸಿದೆ. ಮಹಿಳೆ ಸಾವಿನಿಂದಾಗಿ ಆಕ್ರೋಶಗೊಂಡ ಗ್ರಾಮಸ್ಥರು ಬೇಲೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಚೀಕನಹಳ್ಳಿಯಲ್ಲಿ ರಸ್ತೆ ತಡೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು. ಜಿಲ್ಲೆಯಲ್ಲಿ ಜನವರಿಯಿಂದ 5 ಮಂದಿ ಕಾಡಾನೆ ದಾಳಿಗೆ ಬಲಿಯಾಗಿದ್ದು ಈ ಪೈಕಿ ನಾಲ್ವರು ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯಲ್ಲೇ ಮೃತಪಟ್ಟಿದ್ದಾರೆ.

ಸರ್ಕಾರದ ವಿರುದ್ಧ ಘೋಷಣೆ:

ಕಾಡಾನೆ ದಾಳಿಗೆ ಮಹಿಳೆ ಸಾವು ಖಂಡಿಸಿ ಚೀಕನಹಳ್ಳಿ -ಬೇಲೂರು ರಸ್ತೆ ತಡೆದು ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದಾರೆ. ಕಳೆದ 2 ತಿಂಗಳ ಅಂತರದಲ್ಲಿ ಕಾಡಾನೆ ದಾಳಿಗೆ ನಾಲ್ವರು ಬಲಿಯಾಗಿದ್ದಾರೆ. ಹೀಗಾಗಿ ಕಾಡಾನೆ ಹಾವಳಿ ನಿಯಂತ್ರಿಸದ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts