Gl
ನಿಧನ

ಹಿರಿಯ ವಿದ್ವಾಂಸ ಡಾ.ವಾಮನ ನಂದಾವರ ನಿಧನ!

ಹಿರಿಯ ವಿದ್ವಾಂಸ ಡಾ.ವಾಮನ ನಂದಾವರ (81) ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿದ್ದು, ಇಂದು (ಮಾ.15) ಶನಿವಾರ ಅವರು ನಿಧನ ಹೊಂದಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಹಿರಿಯ ವಿದ್ವಾಂಸ ಡಾ.ವಾಮನ ನಂದಾವರ (81) ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿದ್ದು, ಇಂದು (ಮಾ.15) ಶನಿವಾರ ಅವರು ನಿಧನ ಹೊಂದಿದ್ದಾರೆ.

rachana_rai
Pashupathi
akshaya college
Balakrishna-gowda

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಇವರು ಕನ್ನಡ ಹಾಗೂ ತುಳು ಭಾಷಾ ವಿದ್ವಾಂಸ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದರು.

pashupathi

ಇವರು ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ತಮ್ಮ ಪದವಿ ವ್ಯಾಸಂಗವನ್ನು ಮಾಡಿದ್ದು, ನಂತರ ಮಂಗಳೂರು ಸರಕಾರಿ ಮಹಾವಿದ್ಯಾಲಯದಲ್ಲಿ ಬಿಎಡ್, ಕರ್ನಾಟಕ ವಿವಿಯಿಂದ ಎಂ.ಎ.ಕನ್ನಡ ಪದವಿ ಗಳಿಸಿದ್ದರು. ಇವರು ಮಂಡಿಸಿದ್ದ ಕೋಟಿ ಚನ್ನಯ ಜಾನಪದೀಯ ಅಧ್ಯಯನ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ದೊರಕಿತ್ತು.

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts