ನಿಧನ

ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ನಿಧನ!

tv clinic
ಬಹುಭಾಷಾ ಪಂಡಿತ, ಕನ್ನಡದ ಹಿರಿಯ ಸಾಹಿತಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಡಾ. ಪಂಚಾಕ್ಷರಿ ಹಿರೇಮಠ (92) ಅವರು ಶುಕ್ರವಾರ (ಮಾರ್ಚ್ 14 ರಂದು) ವಿಧಿವಶರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಬಹುಭಾಷಾ ಪಂಡಿತ, ಕನ್ನಡದ ಹಿರಿಯ ಸಾಹಿತಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಡಾ. ಪಂಚಾಕ್ಷರಿ ಹಿರೇಮಠ (92) ಅವರು ಶುಕ್ರವಾರ (ಮಾರ್ಚ್ 14 ರಂದು) ವಿಧಿವಶರಾದರು. ಧಾರವಾಡದ ಜಯನಗರ ನಿವಾಸಿ ಹಾಗೂ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾದ್ಯಾಪಕರಾಗಿದರು. ಪಂಚಾಕ್ಷರಿ ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.

ಕನ್ನಡದ ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಅವರು 19 ಕಾವ್ಯ ಸಂಕಲನಗಳು, 11 ಕಥಾ ಸಂಕಲನಗಳು, ಉರ್ದು ಮತ್ತು ಹಿಂದಿಯಿಂದ ಕನ್ನಡಕ್ಕೆ ತಂದ 8 ಅನುವಾದಿತ ಕಾದಂಬರಿಗಳು, 13 ಪ್ರಬಂಧ ಮತ್ತು ವಿಮರ್ಶೆಯ ಕೃತಿಗಳು, 7 ಚಿಂತನ ಸಾಹಿತ್ಯ ಕೃತಿಗಳು, 6 ಜೀವನ ಚರಿತ್ರೆಗಳು, 3 ಪತ್ರ ಸಾಹಿತ್ಯ ಕೃತಿಗಳು, 2 ಚರಿತ್ರೆಗಳು, 7 ಮಕ್ಕಳ ಸಾಹಿತ್ಯ ಕೃತಿಗಳು, 5 ಅನುವಾದಿತ ನಾಟಕಗಳು, ಸಂಪಾದನೆಯ 8 ಕೃತಿಗಳು, ಹಿಂದಿ, ತೆಲುಗು ಹಾಗೂ ಆಂಗ್ಲ ಭಾಷೆಗೆ ಭಾಷಾಂತರಗೊಂಡ 8 ಕೃತಿಗಳು ಸೇರಿ 100ಕ್ಕೂ ಹೆಚ್ಚು ಉಪಯುಕ್ತ ಕೃತಿಗಳನ್ನು ಸಾರಸ್ವಲೋಕಕ್ಕೆ ಕೊಡುಗೆ ನೀಡಿದ್ದಾರೆ. ಅವರ ಹಲವಾರು ಕೃತಿಗಳು ವಿದೇಶಿ ಭಾಷೆಗಳಲ್ಲಿ ಅನುವಾದಗೊಂಡಿದೆ.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts