Gl harusha
ನಿಧನ

ಪಿಗ್ಮಿ ಸಂಗ್ರಹಕ ವಿಜಯ್ ರೆಬೆಲ್ಲೋ ನಿಧನ!

ಕೂರ್ನಡ್ಕ ನಿವಾಸಿ ಚಾರ್ಲಿ ರೆಬೆಲ್ಲೋರವರ ಪುತ್ರ ಪಿಗ್ಮಿ ಸಂಗ್ರಹಕ ವಿಜಯ್ ರೆಬೆಲ್ಲೋ (45) ರವರು ಮಂಗಳವಾರ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕೂರ್ನಡ್ಕ ನಿವಾಸಿ ಚಾರ್ಲಿ ರೆಬೆಲ್ಲೋರವರ ಪುತ್ರ ಪಿಗ್ಮಿ ಸಂಗ್ರಹಕ ವಿಜಯ್ ರೆಬೆಲ್ಲೋ (45) ರವರು ಮಂಗಳವಾರ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

srk ladders
Pashupathi

ಸೋಮವಾರ ರಾತ್ರಿ ಮಲಗಿದ್ದವರು, ಮಂಗಳವಾರ ಬೆಳಿಗ್ಗೆ ಎದ್ದಿಲ್ಲ. ಪಿಗ್ಮಿ ಸಂಗ್ರಹಕ್ಕೆ ವಿಜಯ್ ಬಂದಿಲ್ಲ ಎಂದು ಗ್ರಾಹಕರು ಕರೆ ಮಾಡಿದಾಗ, ಮೊಬೈಲ್ ಕರೆ ಸ್ವೀಕರಿಸಿಲ್ಲ.

ಬಳಿಕ ಮನೆ ಮಾಲಕರಿಗೆ ಕರೆ ಮಾಡಿ ವಿಚಾರಿಸಿದರು. ಅವರು ಮನೆ ಬಳಿ ಹೋಗಿ ನೋಡಿದಾಗ, ವಿಜಯ್ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ವಿಜಯ್‌ ಅವರು ಅವಿವಾಹಿತರಾಗಿದ್ದು, ಮುಕ್ವೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಅವರ ಸಾವಿಗೆ ಕಾರಣ ತಿಳಿದುಬಂದಿಲ್ಲ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts