ನಿಧನ

ತೆಂಕು- ಬಡಗು ತಿಟ್ಟಿನ ಹಿರಿಯ ಪ್ರಸಿದ್ಧ ಸ್ತ್ರೀವೇಷಧಾರಿ ಕೋಡಿ ಕೃಷ್ಣ ಗಾಣಿಗ ನಿಧನ!

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ತೆಂಕು, ಬಡಗಿನ ಉಭಯತಿಟ್ಟುಗಳ ಹಿರಿಯ ಪ್ರಸಿದ್ಧ ಸ್ತ್ರೀವೇಷಧಾರಿ ಕೋಡಿ ಕೃಷ್ಣ(ಕುಷ್ಠ)ಗಾಣಿಗ(78) ಇಂದು (12.6.2025) ಕುಂದಾಪುರ ತಾ’ಲೂಕಿನ ಕೋಡಿಯಲ್ಲಿರುವ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.

akshaya college

ಹೆರಂಜಾಲು ವೆಂಕಟರಮಣ ಗಾಣಿಗರಿಂದ ಬಡಗುತಿಟ್ಟಿನ ಹೆಜ್ಜೆಗಾರಿಕೆಯನ್ನೂ, ಪಡ್ರೆ ಚಂದು ಅವರಿಂದ ತೆಂಕುತಿಟ್ಟಿನ ನಾಟ್ಯಭ್ಯಾಸವನ್ನು ಕಲಿತು ಓರ್ವ ಪ್ರಸಿದ್ಧ ಸ್ತ್ರೀ ವೇಷಧಾರಿಯಾಗಿ ಕಲಾಭಿಮಾನಿಗಳ ಅಭಿಮಾನಕ್ಕೆ ಪಾತ್ರರಾಗಿದ್ದರು.

ದೇವಿ, ನಂದಿನಿ, ಸುಭದ್ರೆ, ಮಂಡೋದರಿ, ದೌಪದಿ, ಕಯಾದು, ಸೀತೆ, ಅಂಬೆ, ದಮಯಂತಿ, ಮಾಯಾಪೂತನಿ, ಮಾಯಾಶೂರ್ಪನಖಿ, ಚಂದ್ರಮತಿ ಹೀಗೆ ಸ್ತ್ರೀಪಾತ್ರದ ನವರಸಗಳಲ್ಲಿಯೂ ನಿಸ್ಸಿಮರು. ಪುರುಷ ವೇಷಗಳಾದ ಪರಶುರಾಮ, ವಿಷ್ಣು, ಕೃಷ್ಣ ಪಾತ್ರಗಳನ್ನು ಮಾಡುತ್ತಿದ್ದರು. ಇವರು ಅಮೃತೇಶ್ವರೀ, ಮಾರಣಕಟ್ಟೆ, ಕಲಾವಿಹಾರ ಮೇiಳ, ರಾಜರಾಜೇಶ್ವರೀ ಮೇಳ ಹಾಗೂ ಸುದೀರ್ಘವಾಗಿ ಕಟೀಲು ಮೇಳದಲ್ಲಿ ಒಟ್ಟು ಮೂರುವರೆ ದಶಕಗಳ ಕಾಲ ತಿರುಗಾಟವನ್ನು ಮಾಡಿದ್ದಾರೆ. ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಅಭಿಮಾನಿ ವರ್ಗವನ್ನು ಅಗಲಿದ್ದಾರೆ.ಮೇ 31 ರಂದು 50 ಹಿರಿಯ ಸಾಧಕ ಕಲಾವಿದರಿಗೆ ನೀಡಲ್ಪಟ್ಟ 50 ಹಿರಿಯ ಸಾಧಕ ಕಲಾವಿದರಿಗೆ ನೀಡಲ್ಪಟ್ಟ,ಐವತ್ತು ಸಾವಿರ ಮೊತ್ತವನ್ನೊಳಗೊಂಡ ಸುವರ್ಣ ಪುರಸ್ಕಾರಕ್ಕೆ ಭಾಜನರಾದ ಕೋಡಿ ಕುಷ್ಟ ಗಾಣಿಗರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್,ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಅಂತ್ಯಸಂಸ್ಕಾರ ನಾಳೆ ಬೆಳಿಗ್ಗೆ 9 ಗಂಟೆಗೆ ಕೋಡಿಯಲ್ಲಿ ಜರುಗಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts