pashupathi
ನಿಧನ

ಉಪ್ಪಿನಂಗಡಿ: ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ ನಿಧನ!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ (92 ವ) ಉಪ್ಪಿನಂಗಡಿಯ ತಮ್ಮ ಸ್ವ ಗೃಹದಲ್ಲಿ ಶನಿವಾರ (ಜು.19) ಹೃದಯಾಘಾತದಿಂದ ನಿಧನ ಹೊಂದಿದರು.

akshaya college

ತೆಂಕು ಮತ್ತು ಬಡಗು ಎರಡೂ ತಿಟ್ಟುಗಳಲ್ಲಿ ವೇಷಗಳನ್ನು ಮಾಡಿ ಭಾವಾಭಿನಯ ಮತ್ತು ನೃತ್ಯ ಲಾಲಿತ್ಯಗಳಿಂದ ವೈವಿಧ್ಯಮಯ ವೇಷಗಳಲ್ಲಿ ಮೆರೆದ ಹಿರಿಯ ಕಲಾವಿದ ಪಾತಾಳ ವೆಂಕಟರಮಣ ಭಟ್ಟರು.

ಪುತ್ತೂರು ಕೃಷ್ಣಭಟ್ಟರಿಂದ ತೆಂಕುತಿಟ್ಟಿನ ಅಭ್ಯಾಸ ಮಾಡಿದ್ದ ವೆಂಕಟರಮಣ ಭಟ್ಟರು, ಬಳಿಕ ಮೂಲ್ಕಿ ಮೇಳ, ಸುರತ್ಕಲ್ ಮೇಳ, ಸೌಕೂರು ಮೇಳ, ಧರ್ಮಸ್ಥಳದ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಗಳಲ್ಲಿ ತಿರುಗಾಟ ನಡೆಸಿದ್ದರು.

ರಂಭೆ, ಊರ್ವಶಿ, ಮೇನಕೆ, ಸತ್ಯಭಾಮೆ, ಸುಭದ್ರೆ, ದೌಪದಿ, ಮೀನಾಕ್ಷಿ, ಸ್ವಯಂಪ್ರಭೆಯಂತಹ ಪಾತ್ರಗಳಿಗೆ ತನ್ನದೇ ಆದ ಮೆರುಗು ನೀಡಿದ್ದ ಪಾತಾಳರು ಬೇಲೂರಿನ ಶಿಲಾ ಬಾಲಿಕೆಯರ ಅಂಗಭಂಗಿಗಳನ್ನು ಬೇಲೂರಿಗೆ ಹೋಗಿ ಸ್ವತಃ ಅಭ್ಯಸಿಸಿ ಯಕ್ಷಗಾನದಲ್ಲಿ ಅಳವಡಿಸಿದವರು.

ಪಾತಾಳ ವೆಂಕಟರಮಣ ಭಟ್ಟರಿಗೆ ಚೆನ್ನೈನ ಹಿಂದೂಧರ್ಮ ಸಂಘವು ಮಣಿವಿಳಾ ಬಿರುದು ನೀಡಿ ಗೌರವಿಸಿದೆ.ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಗಾನ ಕಲಾರಂಗ ಪ್ರಶಸ್ತಿ, ವಿಟ್ಲ ಗೋಪಾಲಕೃಷ್ಣ ಭಟ್ ಪ್ರತಿಷ್ಟಾನ ಪ್ರಶಸ್ತಿ, ವಿದ್ಯಾಮಾನ್ಯ ಪ್ರಶಸ್ತಿ, ಯಕ್ಷ ಕಲಾನಿಧಿ ಪ್ರಶಸ್ತಿ, ಅಗರಿ ಪ್ರಶಸ್ತಿ, ಕರಾವಳಿ ಯಕ್ಷಗಾನ ಮಂಡಳಿ, ಬಿ.ಬಿ.ಶೆಟ್ಟಿ ಪ್ರಶಸ್ತಿ, ಪಟ್ಟಾಜೆ ಪ್ರಶಸ್ತಿ, ದೇರಾಜೆ ಪ್ರಶಸ್ತಿ, ಕಲ್ಕೂರ ಪ್ರಶಸ್ತಿ ಸೇರಿ ಹಲವು ಗೌರವಗಳು ಸಂದಿವೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts