tamanvi
ನಿಧನ

ಶಾಲಾ ವಾಹನದ ಚಾಲಕನಿಗೆ ಹೃದಯಾಘಾತ: ಸಾವು| ವಿದ್ಯಾರ್ಥಿಗಳ ಪ್ರಾಣ ಉಳಿಸಿ ಸಮಯ ಪ್ರಜ್ಞೆ ಮೆರೆದ ಮೊಯ್ದಿನ್  ಬಾವ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಣಿಪಾಲ: ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು  ಶುಕ್ರವಾರ (ಆ.1) ಬೆಳಿಗ್ಗೆ ನಡೆದಿದೆ.

maithri

ವಿದ್ಯಾರ್ಥಿಗಳನ್ನು ಶಾಲೆಗೆ ಸಾಗಿಸುತ್ತಿರುವಾಗ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದೆ, ಮಾರುಥಿ ವೀಥಿಕಾದಲ್ಲಿ ನಡೆದು ಸಾಗುತ್ತಿದ್ದ ಸಮಾಜಸೇವಕ ನಿತ್ಯಾನಂದ ಒಳಕಾಡುವರನ್ನು ಕಂಡು, ವಾಹನ ನಿಲ್ಲಿಸಿದ ಚಾಲಕ, ಎದೆನೋವಿನ ವಿಚಾರವನ್ನು ಒಳಕಾಡುವರಲ್ಲಿ ಹೇಳಿಕೊಂಡಿದ್ದಾನೆ. ತಕ್ಷಣ ಒಳಕಾಡು ಅವರು ಅಂಬುಲೆನ್ಸ್‌ ವಾಹನದಲ್ಲಿ ಚಾಲಕನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರಿಂದ ಚಾಲಕ ಮೃತಪಟ್ಟಿರುವುದು ತಿಳಿದುಬಂದಿತು. ಮೃತ ಚಾಲಕ ಕಾರ್ಕಳ ನೀರೆ ಬೈಲೂರಿನ ಮೊಯ್ದಿನ್ ಬಾವ (65) ಎಂದು ತಿಳಿದುಬಂದಿದೆ.

ವಿದ್ಯಾರ್ಥಿಗಳಿರುವ ಶಾಲಾವಾಹನ ಚಲನೆಯಲ್ಲಿದ್ದಾಗ ಚಾಲಕ ಮೃತಪಟ್ಟಿದ್ದಲ್ಲಿ ದೊಡ್ಡಮಟ್ಟದ ಅವಘಡ ಸಂಭವಿಸುತ್ತಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts