ನಿಧನ

ಬಿ.ಟಿ. ರಂಜನ್ ಪುತ್ರಿ ಸೌಮ್ಯ ನಿಧನ!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಿ.ಟಿ. ರಂಜನ್ ಸುಪುತ್ರಿ ಸೌಮ್ಯ (29 ವ.) ಅಸೌಖ್ಯದಿಂದ ಶನಿವಾರ ಮುಂಜಾನೆ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನರಾದರು.

chennai-shopping
maithri

ಹಿರಿಯ ಪತ್ರಕರ್ತರಾಗಿ ಜನಮಾನಸದಲ್ಲಿ ಗುರುತಿಸಿಕೊಂಡಿದ್ದ ದಿವಂಗತ ಬಿ.ಟಿ. ರಂಜನ್ ಅವರು ಕೆಲ ವರ್ಷಗಳ ಹಿಂದೆ ನಿಧನರಾಗಿದ್ದರು. ಬಳಿಕ ಸೆಲ್ಕೋ ಕಂಪೆನಿಯಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದ ಸೌಮ್ಯ ತಾಯಿಯೊಂದಿಗೆ ಉಪ್ಪಿನಂಗಡಿಯಿಂದ ಮಣಿಪಾಲಕ್ಕೆ ಶಿಫ್ಟ್ ಆಗಿದ್ದರು ಎನ್ನಲಾಗಿದೆ.

ಈ ನಡುವೆ ಅನಿರೀಕ್ಷಿತವಾಗಿ ಬಂದೆರಗಿದ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಶನಿವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ನೆಹರೂನಗರ ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪೂರೈಸಿದ್ದ ಇವರು, ಬಳಿಕ ದರ್ಬೆ ಸಂತ ಫಿಲೋಮಿನಾ ಕಾಲೇಜಿನಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.

ಮೃತರು ಪತಿ ವೈಭವ್ ಹಾಗೂ ತಾಯಿಯನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts