ಕಡಬ: ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಕಡಬ ಗ್ರಾಮದ ಪಿಜಕಳ ಪರಪ್ಪು ನಿವಾಸಿ ಜನಾರ್ದನ ನಾಯ್ಕ ಅವರ ಪುತ್ರ ವಿನೋದ್ ಪಿ.ಜೆ.(23) ಎಂದು ಗುರುತಿಸಲಾಗಿದೆ.
ಮೈಸೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ವಿನೋದ್ ಅವರಿಗೆ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡು ಕಡಿಮೆಯಾಗಿತ್ತು. ಭಾನುವಾರ ರಾತ್ರಿ ತನ್ನ ರೂಂನಲ್ಲಿ ಊಟ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ.
ಮೃತರು ಅವಿವಾಹಿತರಾಗಿದ್ದಾರೆ, ತಂದೆ, ತಾಯಿ ಹಾಗೂ ಸಹೋದರಿಯನ್ನು ಆಗಲಿದ್ದಾರೆ.