ನಿಧನ

ಭಾಗವತ, ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ನಿಧನ!!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಯಕ್ಷಗಾನ ರಂಗದ ಮೇರು ಭಾಗವತ ಗಾನ, ರಸರಾಗ ಚಕ್ರವರ್ತಿ ಕೋಗಿಲೆ ದಿನೇಶ್ ಅಮ್ಮಣ್ಣಾಯ (68) ಅವರು ಗುರುವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಹೊಸ್ತೋಟ ಪಾಳ್ಯ ನಿವಾಸಿಯಾಗಿರುವ ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

akshaya college

ಅವರು ಕೆಲ ಕಾಲದಿಂದ ಅಸೌಖ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಕರ್ನಾಟಕ ಮೇಳ, ಎಡನೀರು ಮೇಳ ಸಹಿತ ತೆಂಕುತಿಟ್ಟಿನ ಪ್ರಖ್ಯಾತ ಮೇಳಗಳಲ್ಲಿ ಭಾಗವತರಾಗಿ ಜಯಪ್ರಿಯರಾಗಿದ್ದ ಅವರು, ಭಾವಪ್ರಧಾನ ಪ್ರಸಂಗಗಳ ಗಾಯನಕ್ಕೆ ಹೆಸರುವಾಸಿ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts