ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಪಾರ ನಿವಾಸಿ ಸುಬ್ರಹ್ಮಣ್ಯ ಭಟ್ ಅವರ ಪುತ್ರ ಪ್ರೀತಂ ಭಟ್ (40) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾದರು.
ಮೃತರು ತಂದೆ ಸುಬ್ರಹ್ಮಣ್ಯ ಭಟ್, ತಾಯಿ ಮನೋರಮಾ ಎಸ್. ಭಟ್, ಪತ್ನಿ ಸ್ವಾತಿ, ಪುತ್ರ ಸುತೇಜ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಮೃತರ ಮನೆಗೆ ಹಲವಾರು ಗಣ್ಯರು ಭೇಟಿ ನೀಡಿ ಸಂತಾಪ ಸೂಚಿಸಿದರು. ಬೆಟ್ಟಂಪಾಡಿ ರೆಂಜದಲ್ಲಿ ಮೃತದೇಹದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

























