ನಿಧನ

ಕೆಜಿಎಫ್’ನ ಚಾಚಾ ಖ್ಯಾತಿಯ, ಸ್ಯಾಂಡಲ್ ವುಡ್ ಖಳನಟ ಹರೀಶ್ ರಾಯ್ ನಿಧನ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಕಳೆದ ಕೆಲ ವರ್ಷಗಳಿಂದಲೂ ಅನಾರೋಗ್ಯದೊಂದಿಗೆ ಸತತ ಹೋರಾಟ ಮಾಡುತ್ತಲೇ ಇದ್ದ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ ಹೊಂದಿದ್ದಾರೆ.

core technologies

‘ಓಂ’, ‘ನಲ್ಲ’ ಸೇರಿದಂತೆ ‘ಕೆಜಿಎಫ್’, ‘ಕೆಜಿಎಫ್ 2’ ಹಾಗೂ ಕನ್ನಡದ ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ನಟಿಸಿದ್ದ ಹರೀಶ್ ರಾಯ್ ಅವರು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ನಟ ಯಶ್ ಸೇರಿದಂತೆ ಇನ್ನೂ ಹಲವರು ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದರು. ಆದರೆ ಅಂತಿಮವಾಗಿ ಹರೀಶ್ ಅವರು ಇಂದು ನಿಧನ ಹೊಂದಿದ್ದಾರೆ.

akshaya college

ಹರೀಶ್ ರಾಯ್ ಅವರು ಥೈರಾಯ್ಡ್ ಕ್ಯಾನ್ಸರ್​​ನಿಂದ ಬಳಲುತ್ತಿದ್ದರು. ಹೊಟ್ಟೆ ಉಬ್ಬರಗೊಂಡು, ದೇಹವೆಲ್ಲ ಕೃಷಗೊಂಡು ಗುರುತೇ ಸಿಗದಂತೆ ಆಗಿದ್ದರು ಹರೀಶ್ ರಾಯ್. ತಮ್ಮ ಚಿಕಿತ್ಸೆಗಾಗಿ ಅವರು ಸಹಾಯವನ್ನು ಸಹ ಅಂಗಲಾಚಿದ್ದರು. ಅದರಂತೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್, ದರ್ಶನ್ ಅಭಿಮಾನಿ ಬಳಗದವರು ಸೇರಿದಂತೆ ಇನ್ನು ಹಲವಾರು ಮಂದಿ ನಟ, ನಟಿಯರು ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದರು. ನಟ ಯಶ್ ಸಹ ಈ ಹಿಂದೆಯೇ ತಮಗೆ ಸಹಾಯ ಮಾಡಿರುವುದಾಗಿ ಹರೀಶ್ ರಾಯ್ ಹೇಳಿಕೊಂಡಿದ್ದರು.

ಹಲವಾರು ಮಂದಿ ಸಿನಿಮಾ ಮಂದಿ ಹೋಗಿ ಹರೀಶ್ ರಾಯ್ ಅವರನ್ನು ಮಾತನಾಡಿಸಿ ತಾವು ಜೊತೆಗೆ ಇರುವುದಾಗಿ ಭರವಸೆ ನೀಡಿದ್ದರು. ಹಲವು ಯೂಟ್ಯೂಬರ್​​ಗಳು ಸಹ ಹೋಗಿದ್ದರು. ಕಳೆದ ಕೆಲ ತಿಂಗಳುಗಳಿಂದಲೂ ಸತತವಾಗಿ ಚಿಕಿತ್ಸೆಯನ್ನು ಪಡೆಯುತ್ತಲೇ ಇದ್ದರು ಹರೀಶ್ ರಾಯ್. ಇದೀಗ ಕೊನೆಗೆ ನಿಧನ ಹೊಂದಿದ್ದಾರೆ.

ಕರಾವಳಿ ಮೂಲಕ ಹರೀಶ್ ರಾಯ್ ಅವರು 90ರ ದಶಕದ ಹಲವಾರು ಸಿನಿಮಾಗಳಲ್ಲಿ ವಿಲನ್ ಆಗಿ ಮಿಂಚಿದ್ದಾರೆ. ಅಸಲಿಗೆ ನಿಜ ಜೀವನದಲ್ಲಿಯೂ ಸಹ ಪ್ರಕರಣ ಒಂದರಲ್ಲಿ ಹರೀಶ್ ರಾಯ್ ಅವರು ಜೈಲು ಪಾಲಾಗಿದ್ದರು. ದರ್ಶನ್ ಜೈಲಿಗೆ ಹೋದ ಸಂದರ್ಭದಲ್ಲಿ ಹರೀಶ್ ರಾಯ್, ತಮ್ಮ ಜೈಲು ದಿನಗಳನ್ನು ನೆನಸಿಕೊಂಡು ಕಣ್ಣೀರು ಹಾಕಿದ್ದರು. ಹರೀಶ್ ರಾಯ್ ಅವರು ಹೆಂಡತಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಹರೀಶ್ ರಾಯ್ ಅವರು ಕನ್ನಡ ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ನಟಿಸಿದ್ದರು. ಅಂಡರ್​ ವರ್ಲ್ಡ್, ಮೀಂದುಮ್ ಒರು ಕಾದಲ್ ಕಧೈ, ರಾಜ್ ಬಹದ್ದೂರ್, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜಾಫರ್ ಅಲಿಯಾಸ್ ಮುರ್ಗಿ ಜಾಫರ್, ಜೋಡಿ ಹಕ್ಕಿ, ತಾಯವ್ವ, ಓಂ ಹಾಗೂ ಸ್ಯಾಂಡಲ್​ವುಡ್​ನ ಟಾಪ್ ಸಿನಿಮಾ ಕೆಜಿಎಫ್​​ ಚಾಪ್ಟರ್ 1 ಹಾಗೂ ಕೆಜಿಎಫ್​​ ಚಾಪ್ಟರ್ 2 ನಲ್ಲಿ ಅಭಿನಯಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts