ಪುತ್ತೂರು: ನೆಹರುನಗರ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ಶ್ರೀಧರ್ ನಾಯ್ಕ್ (57 ವ.) ಶನಿವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಮೂಲತಃ ಕಾಸರಗೋಡಿನ ಮಧೂರು ನಿವಾಸಿಯಾಗಿರುವ ಇವರು ಪ್ರಸ್ತುತ ಪುತ್ತೂರಿನಲ್ಲಿ ನೆಲೆಸಿದ್ದಾರೆ.
ಇತಿಹಾಸ ವಿಭಾಗದ ಉಪನ್ಯಾಸಕರಾಗಿದ್ದ ಇವರು, ವಿ.ಜಿ. ಭಟ್ ಅವರ ನಿವೃತ್ತಿಯ ನಂತರ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ್ದರು.
ಮೃತರು ಪತ್ನಿ ಹಾಗೂ ಮಗನನ್ನು ಅಗಲಿದ್ದಾರೆ.



























