ಪುತ್ತೂರು: ಸೇಡಿಯಾಪು ಬಳಿಯ ಕಾಡಿನಲ್ಲಿ ಸೋಮವಾರ ಬೆಳಿಗ್ಗೆ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಪಡೀಲ್ ಚಿಕನ್ ಸೆಂಟರಿನಲ್ಲಿ ಕೆಲಸ ಮಾಡುತ್ತಿದ್ದ ಬದ್ರುದ್ದೀನ್ ಡಿ.ಕೆ. (29) ಅವರ ಮೃತದೇಹ ಎಂದು ಗುರುತಿಸಲಾಗಿದೆ.
ರವಿವಾರದಿಂದ ಬದ್ರುದ್ದೀನ್ ನಾಪತ್ತೆಯಾಗಿದ್ದರು. ಆರ್ಥಿಕ ಸಮಸ್ಯೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.
ಅವಿವಾಹಿತರಾಗಿರುವ ಬದ್ರುದ್ದೀನ್ ಅವರು, ತಾಯಿ, ಇಬ್ಬರು ಸಹೋದರ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
























