ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಮಹಿಳೆಯೋರ್ವರಿಗೆ ಹಾವು ಕಚ್ಚಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಶಿಶಿಲ ಗ್ರಾಮದ ಗುಡ್ಡೆ ತೋಟ ನಿವಾಸಿ ಪ್ರೇಮ (55) ಮೃತರು.
ಭಾನುವಾರ ಮಧ್ಯಾಹ್ನದ ವೇಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ನಾಗರಹಾವು ಕಡಿದಿದೆ. ತಕ್ಷಣ ಅವರನ್ನು ಶೌರ್ಯ ವಿಪತ್ತು ತಂಡದ ಸದಸ್ಯರ ಸಹಾಯದೊಂದಿಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಿ ವಿಷ ವಿಪರೀತ ಆವರಿಸಿದ್ದ ಕಾರಣ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಓರ್ವ ಪುತ್ರಿ ವಿಜಯ ಹಾಗೂ ಪುತ್ರ ದಯಾನಂದ ಅವರನ್ನು ಅಗಲಿದ್ದಾರೆ.


























