ಮಂಗಳೂರು, ಮೂಡುಬಿದರೆ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ಬ್ರಹ್ಮವಾಹಕರಾಗಿ ಸೇವೆ ಸಲ್ಲಿಸುತ್ತಿದ್ದ ಪುರೋಹಿತ್ ಸುಕುಮಾರ್ (42 ವ.) ಅವರು ಭಾನುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.
ಶಿರ್ವ ಕುತ್ಯಾರು ನಿವಾಸಿಯಾಗಿರುವ ಇವರು, ಕರಾವಳಿಯ ಹಲವು ಕಡೆಗಳಲ್ಲಿ ಪುರೋಹಿತ ವೃತ್ತಿ ನಡೆಸುತ್ತಿದ್ದರು.
ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ, ಮೂಡಬಿದ್ರೆ ಶ್ರೀ ಕಾಳಿಕಾಂಬಾ ದೇವಸ್ಥಾನ, ಬಾರ್ಕೂರು ಶ್ರೀ ಕಾಳಿಕಾಂಬಾ ದೇವಸ್ಥಾನ, ಕಟಪಾಡಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೆಶ್ವರ ದೇವಸ್ಥಾನ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಬ್ರಹ್ಮವಾಹಕರಾಗಿ ಸೇವೆ ಸಲ್ಲಿಸುತ್ತಿದ್ಸರು.
ಮೃತರು ತಾಯಿ, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಓರ್ವ ಸಹೋದರಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ.


























