ಪುತ್ತೂರು: ತಾಲೂಕು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ, ಆದಾಯ ತೆರಿಗೆ ಇಲಾಖೆಯ ನಿವೃತ್ತ ಇನ್ಸ್’ಪೆಕ್ಟರ್ ಸೇಸಪ್ಪ ಬಂಗೇರ ಅವರ ಪತ್ನಿ ನಿವೃತ್ತ ಶಿಕ್ಷಕಿ ಮಾಲಿನಿ ಪಾಂಗಳಾಯಿ (77 ವ) ಅವರು ಅಸೌಖ್ಯದಿಂದ ಶುಕ್ರವಾರ ಸಂಜೆ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಪುತ್ತೂರು ತಾಲೂಕಿನ ವಿವಿಧ ಶಾಲೆಗಳಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ, ನಿವೃತ್ತರಾಗಿದ್ದರು.
ಮೃತರು ಪತಿ, ಓರ್ವ ಪುತ್ರ, ಓರ್ವ ಪುತ್ರಿ, ಅಳಿಯ, ಸೊಸೆ, ಮೊಮ್ಮಕ್ಕಳನ್ನು ಅಗಲಿದ್ದಾರೆ.



























