tamanvi
ನಿಧನ

ಗಂಗಾಧರ ಆಚಾರ್ಯ ನಿಧನ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಹಳೆನೇರೆಂಕಿ ಗ್ರಾಮದ ಪಾತ್ರ ಮಾಡಿ ನಿವಾಸಿ ಗಂಗಾಧರ ಆಚಾರ್ಯ (64 ವ) ಜ. 5ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಉಪ್ಪಿನಂಗಡಿಯಲ್ಲಿ ನಾಲ್ಕು ದಶಕಗಳಿಂದ ಕಮ್ಮಾರಿಕೆ ವೃತ್ತಿಯನ್ನು ಮಾಡುತ್ತಿದ್ದ ಇವರು ಕೆಲವು ತಿಂಗಳ ಹಿಂದೆ ಹೃದಯ ಸಂಬಂಧಿ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಜನವರಿ 4ರಂದು ಮಂಗಳೂರಿನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದ ಅವರು ಅಸ್ವಸ್ಥಗೊಂಡಾಗ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ಪತ್ನಿ ಸವಿತಾ, ಪುತ್ರರಾದ ಮಹೇಶ್, ರಾಜೇಶ್, ಪುತ್ರಿ ಸೌಮ್ಯ, ಮೂವರು ಸಹೋದರರು, ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ.

ಕಟೀಲು ಮೇಳದಲ್ಲಿ ಕಲಾವಿದರಾಗಿದ್ದ ದಿ. ಗಣಪತಿ ಆಚಾರ್ಯ ಅವರ ಪುತ್ರರಾದ ಇವರು ಕಲಾಭಿಮಾನಿ ಮತ್ತು ಕಲಾಪೋಷಕ.

ಇವರ ನಿಧನಕ್ಕೆ ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ವತಿಯಿಂದ ಸಂತಾಪ ವ್ಯಕ್ತಪಡಿಸಿ ಟ್ರಸ್ಟಿನ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…