ನಿಧನ

ರಿಯಲ್ ಎಸ್ಟೇಟ್ ಕ್ಷೇತ್ರದ ಖ್ಯಾತ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ!

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರಿನ ಖ್ಯಾತ ಉದ್ಯಮಿ ಮತ್ತು ದೇಶ-ವಿದೇಶಗಳಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಹೊಂದಿರುವ ಕಾನ್ಸಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ರಿಚ್‌ಮಂಡ್ ಸರ್ಕಲ್ ಬಳಿಯ ಲ್ಯಾಂಗ್‌ಫರ್ಡ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಈ ಘಟನೆ ನಡೆದಿದ್ದು, ಉದ್ಯಮ ಲೋಕದಲ್ಲಿ ತೀವ್ರ ಆಘಾತ ಮೂಡಿಸಿದೆ.

chennai-shopping
maithri

ಮೂಲಗಳ ಪ್ರಕಾರ, ಕಳೆದ ಕೆಲವು ದಿನಗಳಿಂದ ಕಾನ್ಸಿಡೆಂಟ್ ಗ್ರೂಪ್ ಸಂಸ್ಥೆಗಳ ಮೇಲೆ ಆದಾಯ ತೆರಿಗೆ (IT) ಇಲಾಖೆಯ ಅಧಿಕಾರಿಗಳು ಸತತ ದಾಳಿಗಳನ್ನು ನಡೆಸುತ್ತಿದ್ದರು. ಈ ಐಟಿ ದಾಳಿ ಮತ್ತು ಅದರಿಂದ ಉಂಟಾದ ಕಾನೂನಾತ್ಮಕ ಒತ್ತಡಗಳಿಗೆ ಬೆದರಿದ ಸಿಜೆ ರಾಯ್ ಅವರು, ತಮ್ಮ ಬಳಿಯಿದ್ದ ಪರವಾನಗಿ ಹೊಂದಿದ ರಿವಾಲ್ವರ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಅಶೋಕನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಐಟಿ ದಾಳಿಯ ಸಂದರ್ಭದಲ್ಲಿ ನಡೆದ ಬೆಳವಣಿಗೆಗಳ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts