ನಿಧನ

ಐರ್ಲೆಂಡ್‌ನಲ್ಲಿ ಕಡಬ ಮೂಲದ ಯುವಕನ ನಿಗೂಢ ಸಾವು!

GL

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ: ಉದ್ಯೋಗದ ನಿಮಿತ್ತ ವಿದೇಶಕ್ಕೆ ತೆರಳಿದ್ದ ಕಡಬ ಮೂಲದ ಯುವಕನೊಬ್ಬ ಐರ್ಲೆಂಡ್‌ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ದುರ್ಘಟನೆ ವರದಿಯಾಗಿದೆ.

chennai-shopping
maithri

ಮೃತರನ್ನು ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಸಾಂಜೋ ಸುನಿಲ್ ಎಂದು ಗುರುತಿಸಲಾಗಿದೆ. ಅವರು ಡಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಸಾವಿನ ಕಾರಣ ನಿಗೂಢವಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ವ್ಯಕ್ತವಾಗುತ್ತಿದ್ದರೂ, ಮರಣದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಸಂಬಂಧ ಐರಿಶ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದೇ ವೇಳೆ ಪತಿಯ ಸಾವಿನ ಸುದ್ದಿ ತಿಳಿದುಕೊಂಡ ಪತ್ನಿ ತೀವ್ರ ಆಘಾತಕ್ಕೊಳಗಾಗಿ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts