ನಿಧನ

ಉಪ್ಪಿನಂಗಡಿ: ಸಮಾಜಸೇವಕ, ಉದ್ಯಮಿ ಯು.ಕೆ. ರೋಹಿತಾಕ್ಷ ನಿಧನ

GL

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಇಲ್ಲಿನ ರಾಮ ಲಕ್ಷ್ಮಣ ಆರ್ಕೆಡ್‌ನ ಮಾಲಕರಾಗಿದ್ದು, ಕ್ಲಾಸಿಕ್ ಮೆನ್ಸ್ ವೇರ್ ಟೈಲರಿಂಗ್ ಸಂಸ್ಥೆಯ ಮಾಲಕರೂ ಆಗಿದ್ದ ಹಾಗೂ ವಿವಿಧ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಯು.ಕೆ. ರೋಹಿತಾಕ್ಷ (47) ಅವರು ಅಲ್ಪಕಾಲದ ಅನಾರೋಗ್ಯದಿಂದ ಫೆಬ್ರವರಿ 24 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

chennai-shopping
maithri

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿದ್ದ ಅವರು ಹಿಂದೂ ಪರ ಸಂಘಟನೆಗಳಲ್ಲಿಯೂ ಕಾರ್ಯನಿರ್ವಹಿಸುತ್ತಿದ್ದರು. ಉಪ್ಪಿನಂಗಡಿ ಶ್ರೀ ಮಾಧವ ಶಿಶು ಮಂದಿರದಲ್ಲಿ ಸಂಸ್ಥಾಪಕ ಜೊತೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಅವರು, ಟೈಲರ್ಸ್ ಅಸೋಸಿಯೇಶನ್ ಸಂಸ್ಥೆಯ ಅಧ್ಯಕ್ಷರಾಗಿಯೂ ಕೆಲಸ ನಿರ್ವಹಿಸಿದ್ದರು. ಹಲವು ಸಾಮಾಜಿಕ ಹಾಗೂ ಧಾರ್ಮಿಕ ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಚಿರಪರಿಚಿತರಾಗಿದ್ದ ಇವರು, ಕಳೆದ ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಮೃತರು ತಾಯಿ, ಪತ್ನಿ, ಒಬ್ಬ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts