ಸುಳ್ಯ: ಸುಳ್ಯ ಡಿಗ್ರಿ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕರೋರ್ವರು ಕುಸಿದು ಬಿದ್ದು ಮೃತಪಟ್ಟ ಬಗ್ಗೆ ಗುರುವಾರ ಮಧ್ಯಾಹ್ನ ವರದಿಯಾಗಿದೆ.
ಮೃತರನ್ನು ಮೈಸೂರು ಕೆ.ಆರ್ ನಗರದ ಬೇರ್ಯ ಮೂಲದ ಮಂಜು. ಪಿ. (40) ಎಂದು ಗುರುತಿಸಲಾಗಿದೆ.
ಮಂಜು ಅವರು ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಧ್ಯಾಹ್ನ ತನಕ ತರಗತಿ ನಡೆಸಿ ಬಳಿಕ ತಲೆನೋವು ಎಂದು ವಿದ್ಯಾರ್ಥಿಗಳಲ್ಲಿ ಹೇಳಿದ್ದು, ನಂತರ ಉಪನ್ಯಾಸಕರ ರೂಮಿಗೆ ಹೋಗಿ ರೆಸ್ಟ್ ಪಡೆಯುವುದಾಗಿ ತಿಳಿಸಿದ್ದರು. ಆ ಬಳಿಕ ವಿಪರೀತ ನೋವು ಕಾಣಿಸಿದ ಹಿನ್ನಲೆಯಲ್ಲಿ ಸ್ಥಳೀಯ ಖಾಸಗಿ ಮೆಡಿಕಲ್ ಗೆ ತೆರಳಿ ಔಷಧ ಖರೀದಿಸಲು ಹೋದಾಗ ಅಲ್ಲೆ ಕುಸಿದು ಬಿದ್ದಿದ್ದು ಅವರನ್ನು ಸ್ಥಳೀಯ ಮೆಡಿಕಲ್ ನವರು ಆಸ್ಪತ್ರೆಗೆ ದಾಖಲಿಸಿದ್ದು, ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಮೃತರು ಪತ್ನಿ ಹಾಗೂ ಓರ್ವ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಮಂಜು ಅವರು ಈ ಹಿಂದೆ ಕೆ.ಆರ್. ನಗರದಲ್ಲಿ ಪ್ರೌಢ ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ಬಳಿಕ ಕೆ ಸೆಟ್ ಪರೀಕ್ಷೆಯನ್ನು ಉತ್ತೀರ್ಣರಾಗಿ 2024ರ ನವಂಬರ್ ನಲ್ಲಿ ಪ್ರಥಮ ದರ್ಜೆ ಕಾಲೇಜು ಕನ್ನಡ ಸಹ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.























