tamanvi
ನಿಧನ

ಬೆಳಾಲು: ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

maithri

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ದಿನೇಶ್ ನಾಯ್ಕ್ ಅವರ ಎರಡನೇ ಪುತ್ರಿ ರಮಾ (19) ಏ. 25ರಂದು ರಾತ್ರಿ ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತು. ಆದ್ರೆ ಚಿಕಿತ್ಸೆ ಫಲಿಸದೆ ರಮ ಏ. 29ರಂದು ರಾತ್ರಿ 12 ಗಂಟೆಗೆ ಸಾವನ್ನಪ್ಪಿದ್ದಾರೆ.

ರಮಾ ವಾಮದಪದವು ಕಾಲೇಜ್ ನಲ್ಲಿ ಎರಡನೇ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದರು. ಯುವಕನೊಬ್ಬನನ್ನು ಪ್ರೀತಿ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಈ ವಿಚಾರ ಎರಡು ಮನೆಯವರಿಗೂ ತಿಳಿದು ಒಪ್ಪಿಗೆ ಸೂಚಿಸಿದ್ದರು ಎಂದು ತಿಳಿದುಬಂದಿದೆ.

ಈ ನಡುವೆ ರಮಾ ಅವರು ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ವರದಿಯಾಗಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts