tamanvi
ನಿಧನ

ಹಾಯ್ದ ಹೋರಿ: ಗಾಯಗೊಂಡಿದ್ದ ಮಹಮ್ಮದ್ ಶರೀಫ್ ಮೃತ್ಯು!! ಸಾವಿಗೆ ಉಪ್ಪಿನಂಗಡಿ ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂಬ ಆರೋಪ: ವೈದ್ಯಕೀಯ ತಂಡ ರಚನೆಗೆ ಒತ್ತಾಯ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಹೋರಿ ಹಾಯ್ದು ಗಾಯಗೊಂಡ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಇದಕ್ಕೆ ಉಪ್ಪಿನಂಗಡಿ ಖಾಸಾಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದೆ.

ಮೃತಪಟ್ಟವರನ್ನು ಗೇರುಕಟ್ಟೆ ನಿವಾಸಿ ಮಹಮ್ಮದ್ ಶರೀಫ್ ಪಿ. (35 ವ.) ಎಂದು ಗುರುತಿಸಲಾಗಿದೆ. ಮೃತರ ಸಹೋದರ ನಾಸಿರುದ್ದೀನ್ ಪಿ. ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೇ 14ರಂದು ರಾತ್ರಿ ಮನೆಯಲ್ಲಿದ್ದ ಹೋರಿ ಹಾಯ್ದು ಮಹಮ್ಮದ್ ಶರೀಫ್ ಗಾಯಗೊಂಡಿದ್ದರು. ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮೇ 16ರಂದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೇ 20ರಂದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸಹೋದರನ ಆರೋಪ:

ಉಪ್ಪಿನಂಗಡಿ ಖಾಸಾಗಿ ಆಸ್ಪತ್ರೆಯ ವೈದ್ಯರು ನಿರ್ಲಕ್ಷ್ಯದಿಂದ ಸರಿಯಾಗಿ ಚಿಕಿತ್ಸೆ ನೀಡದೇ ಇರುವುದರಿಂದ ಮಹಮ್ಮದ್ ಶರೀಫ್ ಅವರ ಆರೋಗ್ಯ ಹದಗೆಟ್ಟಿತ್ತು ಎಂದು ದೂರಿನಲ್ಲಿ ಆಪಾದಿಸಲಾಗಿದೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್ ಸಂಖ್ಯೆ 28/2026 ಅಡಿಯಲ್ಲಿ, ಬಿ.ಎನ್.ಎಸ್.ಎಸ್ 2023ರ ಕಲಂ 194(3)(iv) ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ವೈದ್ಯಕೀಯ ತಂಡ ರಚನೆಗೆ ಒತ್ತಾಯ:

ಪ್ರಕರಣದಲ್ಲಿ ವೈದ್ಯರ ನಿರ್ಲಕ್ಷ್ಯದ ಆರೋಪಗಳನ್ನು ಪರಿಶೀಲಿಸಿ ವರದಿ ಸಲ್ಲಿಸಲು ವೈದ್ಯಕೀಯ ತಂಡ ರಚಿಸುವಂತೆ ಸಂಬಂಧಿತ ಇಲಾಖೆಗೆ ಪತ್ರ ಬರೆಯಲಾಗಿದೆ. ವರದಿ ಬಂದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…