ನಿಧನ

ನದಿಗೆ ಬಿದ್ದು ಮುಂಡ್ಕೂರಿನ ಯುವಕ ಮೃತ್ಯು!!

ಈ ಸುದ್ದಿಯನ್ನು ಶೇರ್ ಮಾಡಿ

ಕಾರ್ಕಳ: ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಇಷಾನ್ ಪಾಶಾ (40) ಎಂಬವರು ಮನೆಯ ಬಳಿ ಇರುವ ಶಾಂಭವಿ ನದಿಗೆ ಅಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ.

ಮೂಲತ: ಮೈಸೂರು ಜಿಲ್ಲೆ ಪಿರಿಯಾಪಟ್ಟಣದವರಾದ ಇಷಾನ್ ಪಾಶಾ ಏಳು ತಿಂಗಳ ಹಿಂದೆ ಶಮೀನ್ ಎಂಬವರನ್ನು ಮದುವೆಯಾಗಿ ಜಾರಿಗೆಕಟ್ಟೆಯಲ್ಲಿ ವಾಸವಾಗಿದ್ದು, ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದರು.

ಮೇ 25ರಂದು ಜೋಕಟ್ಟೆಯ ತಂಗಿಯ ಮನೆಯಿಂದ ಬಂದು ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೋದವರು ನಾಪತ್ತೆಯಾಗಿದ್ದರು. ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಅವರ ಶವ ಕೊಳೆತ ಸ್ಥಿತಿಯಲ್ಲಿ ಶೆಟ್ಟಿಬೆಟ್ಟು ಎಂಬಲ್ಲಿ ಶಾಂಭವಿ ನದಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಶಾಲಾ ವಾಹನದ ಚಾಲಕನಿಗೆ ಹೃದಯಾಘಾತ: ಸಾವು| ವಿದ್ಯಾರ್ಥಿಗಳ ಪ್ರಾಣ ಉಳಿಸಿ ಸಮಯ ಪ್ರಜ್ಞೆ ಮೆರೆದ ಮೊಯ್ದಿನ್  ಬಾವ!!

ಮಣಿಪಾಲ: ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ…