tamanvi
ನಿಧನ

ಬೆದ್ರಾಳ: ಸಾಗರ್ ಇಬ್ರಾಹಿಂ ಹಾಜಿ ನಿಧನ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರಿನ ಬೆದ್ರಾಳ ನಿವಾಸಿ, ಉದ್ಯಮಿ, ಎಸ್.ಡಿ.ಪಿ.ಐ. ಪುತ್ತೂರು ಘಟಕ ಅಧ್ಯಕ್ಷರಾಗಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರು ಶುಕ್ರವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದರು.

ಸಾಗರ್ ಇಬ್ರಾಹಿಂ ಹಾಜಿ ಅವರು ಈ ಹಿಂದೆ ಪುತ್ತೂರಿನ ಬಡಕ್ಕೋಡಿ ಜುಮಾ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷರಾಗಿ, ಎಸ್‌ಡಿಪಿಐ ಪುತ್ತೂರು ಘಟಕದ ಅಧ್ಯಕ್ಷರಾಗಿ ಹಾಗೂ ಪುತ್ತೂರು ತಾಲೂಕು ಜಮಿಯ್ಯತುಲ್ ಫಲಾಹ್ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ವಿವಿಧ ಸಾಮಾಜಿಕ, ಧಾರ್ಮಿಕ ಹಾಗೂ ಸೇವಾ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ, ಪುತ್ರ ಜಸೀನ್ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…