tamanvi
ನಿಧನ

ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ನಿಧನ!

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ಸುಳ್ಯದ ಹೆಸರಾಂತ ಇಎನ್‌ಟಿ ತಜ್ಞ ವೈದ್ಯ ಡಾ. ರವಿಶಂಕರ್ ಅವರ ಹಿರಿಯ ಪುತ್ರಿ ಅಭಿಜ್ಞಾ ಭಟ್ (19) ಅವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರ (ಜೂನ್ 10) ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅಭಿಜ್ಞಾ ಭಟ್ ಅವರು ಇತ್ತೀಚೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 595 ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ಐದನೇ ರ್ಯಾಂಕ್ ಪಡೆದು ಗಮನ ಸೆಳೆದಿದ್ದರು. ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ರಾಜ್ಯದಾದ್ಯಂತ ಮೆಚ್ಚುಗೆ ಪಡೆದಿದ್ದರು.

ಮೃತರು ತಂದೆ ಡಾ. ರವಿಶಂಕರ್, ತಾಯಿ ಅನುಪಮ, ಸಹೋದರಿ ಅನುಜ್ಞ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…