tamanvi
ನಿಧನ

ಬಜತ್ತೂರು: ವಿಷ ಸೇವಿಸಿ ವಸಂತ ಗೌಡ ಆತ್ಮಹತ್ಯೆ..!!

ಈ ಸುದ್ದಿಯನ್ನು ಶೇರ್ ಮಾಡಿ

ಬಜತ್ತೂರು ಗ್ರಾಮದ ಪುಣಿಕೆದಡಿ ಮನೆ ನಿವಾಸಿ ವಸಂತ ಗೌಡ (48) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಜೂನ್ 4ರಂದು ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಸುಮಾರು ಹತ್ತು ವರ್ಷಗಳ ಹಿಂದೆಯೇ ಪತ್ನಿ ಮಗನೊಂದಿಗೆ ತವರು ಮನೆಗೆ ತೆರಳಿದ್ದರು ಎನ್ನಲಾಗಿದೆ. ಬಳಿಕ ವಸಂತ ಗೌಡರು ಒಂಟಿಯಾಗಿ ಜೀವನ ನಡೆಸುತ್ತಿದ್ದರು. ಜೀವನದಲ್ಲಿ ನೊಂದು ಅವರು ಕೃತ್ಯ ಎಸಗಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…