tamanvi
ನಿಧನ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ!

ಈ ಸುದ್ದಿಯನ್ನು ಶೇರ್ ಮಾಡಿ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ (85) ನಿಧನ ಹೊಂದಿದ್ದಾರೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಜುಲೈ 18) ಕೊನೆಯುಸಿರೆಳೆದಿದ್ದಾರೆ.  ಉಸಿರಾಟದ ಸಮಸ್ಯೆಯಿಂದಾಗಿ  ಚೆನ್ನಮ್ಮ  ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನ ಬೆಂಗಳೂರಿನ  ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯ ಡಾ.ಸತ್ಯನಾರಾಯಣ ಅವರು ಚನ್ನಮ್ಮನವರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ.

ಚೆನ್ನಮ್ಮನ ಅಂತಿಮ ದರ್ಶನ ಪಡೆಯಲು ಗಣ್ಯರು ಮತ್ತು ಸಂಬಂಧಿಕರು ಮಣಿಪಾಲ್ ಆಸ್ಪತ್ರೆ ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ. ಅಲ್ಲದೇ ಜೆಡಿಎಸ್ ಕಾರ್ಯಕರ್ತರು ಸಹ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆ ಬಳಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದ್ದು, ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಭದ್ರತೆ ಪರಿಶೀಲನೆ ಮಾಡಿದರು.

ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ಚನ್ನಮ್ಮ ಅವರು 1954 ಮೇ 25ರಂದು ಹೆಚ್​​.ಡಿ. ದೇವೇಗೌಡರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ಹೆಚ್​​.ಡಿ. ರೇವಣ್ಣ, ಹೆಚ್​​.ಡಿ. ಬಾಲಕೃಷ್ಣ, ಹೆಚ್​​.ಡಿ. ರಮೇಶ್​​ ಗೌಡ, ಹೆಚ್​​.ಡಿ. ಕುಮಾರಸ್ವಾಮಿ, ಶೈಲಜಾ ಹಾಗೂ ಅನಸೂಯಾ ಸೇರಿ ಒಟ್ಟು ನಾಲ್ವರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಚನ್ನಮ್ಮ ದೇವೇಗೌಡರ ರಾಜಕೀಯ ಜೀವನದ ಬೆನ್ನೆಲುಬಿನಂತಿದ್ದು, ಸದಾ ಕಾಲ ರಾಜಕೀಯದಲ್ಲಿ ಬ್ಯುಸಿಯಾಗಿದ್ದ ದೇವೇಗೌಡರಿಗೆ ಕುಟುಂಬದ ಹೊರೆ ಬೀಳದಂತೆ ಸಂಸಾರ ನಿಭಾಯಿಸುವ ಮೂಲಕ ಗಟ್ಟಿಗಿತ್ತಿ ಎನಿಸಿಕೊಂಡಿದ್ದರು. ಆರು ಮಕ್ಕಳನ್ನ ಸಲಹಿದ್ದಲ್ಲದೆ, ಅವರ ಶಿಕ್ಷಣದ ಜವಾಬ್ದಾರಿ ಹೊತ್ತು ಆದರ್ಶ ಗೃಹಿಣಿಯಾಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…