tamanvi
ನಿಧನ

ಅಡಿಕೆ ಮರ ಮುರಿದು ಬಿದ್ದು ಕುಂತೂರಿನ ಯಾದವ ಗೌಡ ಮೃತ್ಯು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಳೆಗಾಳಿಗೆ ಅಡಿಕೆಮರ ಮುರಿದು ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳದಲ್ಲಿ ನಡೆದಿದೆ.

maithri

ಯಾದವ ಗೌಡ (66) ಎಂಬವರು ಮೃತಪಟ್ಟವರು. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಬೀಸಿದ ಮಳೆಗಾಳಿಗೆ ಅಡಿಕೆಮರ ಮುರಿದು ಬಿದ್ದು ಯಾದವ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ತಹಶೀಲ್ದಾರ್ ಗಣೇಶ್ ಸವಣೂರ, ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts