tamanvi
ನಿಧನ

ಸೂರಿಂಜೆ: ವಾಲಿಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಲಿಖಿತ್ ಮೃತ್ಯು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಸುರತ್ಕಲ್: ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ 10ನೇ ತರಗತಿ ವಿದ್ಯಾರ್ಥಿಯೊಬ್ಬ ಹಠಾತ್ ಕುಸಿದು ಬಿದ್ದು ಮೃತಪಟ್ಟ ದುರ್ಘಟನೆ ಸುರತ್ಕಲ್ ಸಮೀಪದ ಸೂರಿಂಜೆ ಗ್ರಾಮದಲ್ಲಿ ಬುಧವಾರ (ಆ.5) ಸಂಜೆ ನಡೆದಿದೆ.

maithri

ಮೃತ ವಿದ್ಯಾರ್ಥಿಯನ್ನು ಲಿಖಿತ್ ಅಮೀನ್ (15) ಎಂದು ಗುರುತಿಸಲಾಗಿದೆ. ಈತ ಸೂರಿಂಜೆ ನಿವಾಸಿ ಮಾಧವ ಅಮೀನ್ ಅವರ ಪುತ್ರನಾಗಿದ್ದು, ಸೂರಿಂಜೆ ಕೋಟೆ ಬೊಳ್ಳಾರು ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಯಾಗಿದ್ದ.

ಬುಧವಾರ ಸಂಜೆ ಸ್ನೇಹಿತರೊಂದಿಗೆ ಸೂರಿಂಜೆ ಮೈದಾನದಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಲಿಖಿತ್ ಏಕಾಏಕಿ ಕುಸಿದು ಬಿದ್ದಿದ್ದಾನೆ. ಕೂಡಲೇ ಸ್ನೇಹಿತರು ಹಾಗೂ ಸ್ಥಳೀಯರು ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಪ್ರತಿಭಾವಂತ ಹಾಗೂ ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿದ್ಯಾರ್ಥಿಯ ಅಕಾಲಿಕ ನಿಧನದಿಂದ ಶಾಲೆ ಹಾಗೂ ಸೂರಿಂಜೆ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಕುಟುಂಬಸ್ಥರ ಆಕ್ರಂದನ ಮನಕಲಕುವಂತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts