tamanvi
ನಿಧನ

ಪಡುಬಿದ್ರಿಯಲ್ಲಿ ಗುಂಡಿನ ದಾಳಿ: ಮುದರಂಗಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಪಡುಬಿದ್ರಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರು ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಮೃತಪಟ್ಟ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.

ಮಾಹಿತಿಯಂತೆ, ಗುರುವಾರ ಮಧ್ಯಾಹ್ನ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಡೇವಿಡ್ ಡಿಸೋಜ ಅವರ ಮೇಲೆ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಡೇವಿಡ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮಾರ್ಗಮಧ್ಯೆಯೇ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದು ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಆರಂಭಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…