tamanvi
ಅಪಘಾತನಿಧನ

ಡೇವಿಡ್ ಡಿಸೋಜ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಡೇವಿಡ್ ಡಿಸೋಜ ಅವರನ್ನು ಹತ್ಯೆಗೈಯಲು ಉತ್ತರ ಪ್ರದೇಶ, ಜಾರ್ಖಂಡ್ ಹಾಗೂ ಬಿಹಾರದ ಶಾರ್ಪ್ ಶೂಟರ್‌ಗಳಿಗೆ ಸುಪಾರಿ ನೀಡಲಾಗಿತ್ತು ಎಂಬುದು ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿದೆ. ಅದರಂತೆ ಮೂವರು ಶಾರ್ಪ್ ಶೂಟರ್‌ಗಳ ತಂಡ ಮುದರಂಗಡಿಗೆ ಆಗಮಿಸಿ ಗುಂಡಿಕ್ಕಿ ಹತ್ಯೆ ನಡೆಸಿದ ಬಳಿಕ ಪರಾರಿಯಾಗಲು ಯತ್ನಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಳಿಕ ಉಡುಪಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಉಡುಪಿ ಜಿಲ್ಲೆಯ ಗಡಿ ಪ್ರದೇಶವಾದ ಶಿರೂರು ಸಮೀಪ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಲ್ಲಿ ಒಬ್ಬನನ್ನು ರಾಜು ಎಂದು ಗುರುತಿಸಲಾಗಿದ್ದು, ಉಳಿದ ಇಬ್ಬರು ಆರೋಪಿಗಳು ಹಲವು ರೀತಿಯ ನಕಲಿ ಗುರುತಿನ ಚೀಟಿಗಳನ್ನು ಹೊಂದಿದ್ದರು ಎನ್ನಲಾಗಿದೆ. ಬಂಧಿತರ ಸಂಪೂರ್ಣ ಗುರುತು ಹಾಗೂ ಇತರ ವಿವರಗಳನ್ನು ಪೊಲೀಸರು ಇನ್ನಷ್ಟೇ ಖಚಿತಪಡಿಸಬೇಕಿದೆ.

ಇದೀಗ ಡೇವಿಡ್ ಡಿಸೋಜ ಅವರ ಹತ್ಯೆಗೆ ಸುಪಾರಿ ನೀಡಿದ ಪ್ರಮುಖ ಆರೋಪಿಗಳ ಪತ್ತೆಗೆ ಉಡುಪಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…