tamanvi
ನಿಧನ

ಕಾಸರಗೋಡು: ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ; ಆಘಾತ ತಾಳಲಾರದೆ ಭಾವೀ ಪತಿಯೂ ಸಾವು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಕಾಸರಗೋಡು: ಮದುವೆ ನಿಶ್ಚಯವಾಗಿದ್ದ ಎಸ್‌ಬಿಐ ಉದ್ಯೋಗಿ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ಆಕೆಯ ಭಾವೀ ಪತಿಯೂ ಮೃತಪಟ್ಟಿರುವ ದಾರುಣ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಮೃತರನ್ನು ಕಾಸರಗೋಡು ಪೂಚ್ಚಕ್ಕಾಡ್ ನಿವಾಸಿ ಪಿ. ಅನುಶ್ರೀ (25) ಹಾಗೂ ಕಣ್ಣೂರು ಅಂಬಲತ್ತಟ್ಟು ನಿವಾಸಿ ವಿ. ಅಮಲ್ (27) ಎಂದು ಗುರುತಿಸಲಾಗಿದೆ. ಇಬ್ಬರೂ ಎಸ್‌ಬಿಐ ಉದ್ಯೋಗಿಗಳಾಗಿದ್ದರು. ಅನುಶ್ರೀ ಅವರು ಕರ್ನಾಟಕದ ಮೈಸೂರು ಜಿಲ್ಲೆಯ ಹುಣಸೂರು ಶಾಖೆಯಲ್ಲಿ ಹಾಗೂ ಅಮಲ್ ಅವರು ಎರ್ನಾಕುಳಂನ ಎಸ್‌ಬಿಐ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

maithri

ಕುಟುಂಬಸ್ಥರ ಪರಸ್ಪರ ಮಾತುಕತೆಯ ಬಳಿಕ ಇಬ್ಬರ ವಿವಾಹವನ್ನು ಮುಂದಿನ ಡಿಸೆಂಬರ್ 26ರಂದು ನಡೆಸಲು ನಿಶ್ಚಯಿಸಲಾಗಿತ್ತು ಎನ್ನಲಾಗಿದೆ.

ಮಂಗಳವಾರ ಹುಣಸೂರಿನಲ್ಲಿದ್ದ ಅನುಶ್ರೀ ಅವರು ಫೋನ್‌ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ವಿಚಾರ ತಿಳಿದ ಬಳಿಕ ಅಮಲ್ ತೀವ್ರವಾಗಿ ಮನನೊಂದು ಕೇರಳದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಒಂದೇ ಕುಟುಂಬದ ಭಾಗವಾಗಬೇಕಿದ್ದ ಯುವ ಜೋಡಿ ಒಂದೇ ದಿನದ ಅಂತರದಲ್ಲಿ ಮೃತಪಟ್ಟಿರುವುದು ಉಭಯ ಕುಟುಂಬಸ್ಥರು ಹಾಗೂ ಸಂಬಂಧಿಕರಲ್ಲಿ ತೀವ್ರ ಆಘಾತ ಮತ್ತು ದುಃಖಕ್ಕೆ ಕಾರಣವಾಗಿದೆ.ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಹುಣಸೂರು ಹಾಗೂ ಕೇರಳ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…