tamanvi
ನಿಧನ

ಚಾಮರಾಜನಗರದ ದಟ್ಟಿ ಅರಣ್ಯದಲ್ಲಿ ಗುಂಡಿನ ಚಕಮಕಿ: ಮೂವರು ಬೇಟೆಗಾರರು ಸಾವು

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಹಾಗೂ ಶಂಕಿತ ಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ದಟ್ಟಿ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮಾಂಸ ಬೇರ್ಪಡಿಸುತ್ತಿದ್ದ ವೇಳೆ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸಿಬ್ಬಂದಿ ಶಸ್ತ್ರಾಸ್ತ್ರ ಕೆಳಗಿಟ್ಟು ಶರಣಾಗುವಂತೆ ಸೂಚಿಸಿದರೂ, ಬೇಟೆಗಾರರು ಅರಣ್ಯ ಸಿಬ್ಬಂದಿಯತ್ತ ಗುಂಡು ಹಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೆ ಪ್ರತಿಯಾಗಿ ಅರಣ್ಯ ಸಿಬ್ಬಂದಿ ಕೌಂಟರ್ ಫೈರಿಂಗ್ ನಡೆಸಿದ್ದು, ಗುಂಡೇಟಿಗೆ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮೃತರನ್ನು ಹನೂರು ತಾಲೂಕಿನ ತೋಮಿಯಾರ್ ಪಾಳ್ಯದ ಕುಮಾರ್, ಅಂತೋನಿ ಸ್ವಾಮಿ ಹಾಗೂ ಪೀಟರ್ ಎಂದು ಗುರುತಿಸಲಾಗಿದೆ ಎಂದು ಮೂಲ ವರದಿ ತಿಳಿಸಿದೆ.

ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಕಾರ್ಯಾಚರಣೆಯ ಕುರಿತು ತನಿಖೆ ಮುಂದುವರಿದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…