tamanvi
ನಿಧನ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇನ್ನಿಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಹಾಗೂ ರಾಜ್ಯದ ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ (67) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ದೀರ್ಘಕಾಲದಿಂದ ಮೆದುಳಿನ ಟ್ಯೂಮರ್‌ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಜಯನಗರದಲ್ಲಿರುವ ಪುತ್ರಿಯ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಆರೋಗ್ಯ ಸ್ಥಿತಿ ಗಂಭೀರಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಬಿ.ಸಿ. ನಾಗೇಶ್ ಅವರ ನಿಧನಕ್ಕೆ ರಾಜ್ಯ ರಾಜಕೀಯ ವಲಯದಿಂದ ತೀವ್ರ ಸಂತಾಪ ವ್ಯಕ್ತವಾಗಿದೆ.

ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ 2021ರಿಂದ 2023ರವರೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಇಲಾಖೆಯ ಸಚಿವರಾಗಿ ಅವರು ಕಾರ್ಯನಿರ್ವಹಿಸಿದ್ದರು.

ತುಮಕೂರು ಜಿಲ್ಲೆಯ ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಬಿ.ಸಿ. ನಾಗೇಶ್, ರಾಜ್ಯ ರಾಜಕೀಯದಲ್ಲಿ ಹಿರಿಯ ಬಿಜೆಪಿ ನಾಯಕರಾಗಿ ಗುರುತಿಸಿಕೊಂಡಿದ್ದರು.

ಪಾರ್ಥಿವ ಶರೀರವನ್ನು ಇಂದು ರಾತ್ರಿಯೇ ಬೆಂಗಳೂರಿನಿಂದ ಅವರ ಸ್ವಕ್ಷೇತ್ರ ತಿಪಟೂರಿಗೆ ರವಾನಿಸಲಾಗುತ್ತಿದ್ದು, ಆಗಸ್ಟ್ 19ರಂದು ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಬಳಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…