tamanvi
ನಿಧನ

ವಿಟ್ಲ: ಕೋಟಿ ಕೆರೆಯಲ್ಲಿ ಈಜಲು ತೆರಳಿದ್ದ DCC ಬ್ಯಾಂಕ್ ಸಿಬ್ಬಂದಿ ಮೃತ್ಯು..!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಟ್ಲದ ಕೋಟಿಕೆರೆ ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಮೃತರನ್ನು ವಿಟ್ಲ ಕಸಬಾ ಗ್ರಾಮದ ಗಾಳಿಹಿತ್ತಿಲು ನಿವಾಸಿ ವೀರಪ್ಪ ಗೌಡ ಅವರ ಪುತ್ರ, ಕನ್ಯಾನ ಎಸ್‌ಸಿಡಿಸಿಸಿ ಬ್ಯಾಂಕ್ ಶಾಖೆಯ ಸಿಬ್ಬಂದಿ ಲಿತಿನ್ (32) ಎಂದು ಗುರುತಿಸಲಾಗಿದೆ.

ಮಂಗಳವಾರ ಬೆಳಗ್ಗಿನ ಜಾವ ಲಿತಿನ್ ಅವರು ಕೋಟಿಕೆರೆಗೆ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ. ಘಟನೆ ಗಮನಿಸಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ, ಹರಸಾಹಸಪಟ್ಟು ಅವರನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದು ತಿಳಿದುಬಂದಿದೆ.

ಮೃತರು ತಂದೆ, ತಾಯಿ, ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ.

ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…