tamanvi
ನಿಧನ

ಉಪ್ಪಿನಂಗಡಿ: ಮಹಿಳೆ ಅನುಮಾನಾಸ್ಪದ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಪೆರ್ನೆ ಸಮೀಪ ಮಹಿಳೆಯೊಬ್ಬರು ಮನೆಯೊಳಗೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.

ಮೃತ ಮಹಿಳೆಯನ್ನು ಸೇವಾ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾವ್ಯ ಎಂದು ಗುರುತಿಸಲಾಗಿದೆ. ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದ್ದು, ಘಟನೆಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮೃತದೇಹದ ಸ್ಥಿತಿಯನ್ನು ಗಮನಿಸಿದಾಗ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿವೆ.

ಇದು ಆತ್ಮಹತ್ಯೆಯೇ ಅಥವಾ ಬೇರೆ ಯಾವುದಾದರೂ ಕಾರಣದಿಂದ ನಡೆದ ಸಾವೇ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಪೊಲೀಸ್ ತನಿಖೆಯ ಬಳಿಕವಷ್ಟೇ ಸಾವಿನ ನಿಖರ ಕಾರಣ ತಿಳಿದುಬರಲಿದೆ.

ಮೃತ ಕಾವ್ಯ ಅವರಿಗೆ ಇಬ್ಬರು ಮಕ್ಕಳಿದ್ದು, ಇತ್ತೀಚೆಗಷ್ಟೇ ಪುತ್ರಿಯ ವಿವಾಹ ನೆರವೇರಿಸಿದ್ದರು ಎನ್ನಲಾಗಿದೆ. ಪುತ್ರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಸಾವಿನ ಕುರಿತು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…