tamanvi
ನಿಧನ

ಸಾಮಾಜಿಕ ಕ್ಷೇತ್ರದ ಹಿರಿಯ ಮುಖಂಡ ಕುಂಞಣ್ಣ ಗೌಡ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

ಕೊಂಬಾರು: ಮಣಿಭಾಂಡದಲ್ಲಿ ನೆಲೆಸಿದ್ದ ಸಾಮಾಜಿಕ ಧುರೀಣ ಹಾಗೂ ಲೋಕೋಪಯೋಗಿ ಇಲಾಖೆಯ ಪ್ರಮೋದ್ ಕುಮಾರ್ ಅವರ ತಂದೆ ಕುಂಞಣ್ಣ ಗೌಡ ಅವರು ನಿಧನರಾಗಿದ್ದಾರೆ.

ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಕುಂಞಣ್ಣ ಗೌಡ ಅವರ ನಿಧನಕ್ಕೆ ಕುಟುಂಬಸ್ಥರು, ಬಂಧು-ಮಿತ್ರರು ಹಾಗೂ ಹಿತೈಷಿಗಳು ಸಂತಾಪ ಸೂಚಿಸಿದ್ದಾರೆ.

ಮೃತರ ಪಾರ್ಥಿವ ಶರೀರವನ್ನು ಮಧ್ಯಾಹ್ನ 1 ಗಂಟೆಯವರೆಗೆ ಪುತ್ತೂರಿನ ಮನೆಯಲ್ಲಿ ಅಂತಿಮ ದರ್ಶನಕ್ಕಾಗಿ ಇರಿಸಲಾಗುವುದು. ಬಳಿಕ ಮಣಿಭಾಂಡದಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಬಂಧು-ಮಿತ್ರರು ಹಾಗೂ ಹಿತೈಷಿಗಳು ಪ್ರಾರ್ಥಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…