ಮೂಡುಬಿದಿರೆ: ಬಿಜೆಪಿ ಮೂಲ್ಕಿ–ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ ಮುಖಂಡ, ಎಕ್ಕಾರು ನಿವಾಸಿ ಪ್ರತೀಕ್ ಶೆಟ್ಟಿ (39) ಅವರು ಸೆ.22ರಂದು ನಿಧನರಾದರು.
ಉದ್ಯಮಿಯಾಗಿದ್ದ ಪ್ರತೀಕ್ ಶೆಟ್ಟಿ ಅವರು ಹಲವು ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಮೂಲ್ಕಿ–ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಯುವ ಮುಖಂಡರಾಗಿ ಗುರುತಿಸಿಕೊಂಡಿದ್ದ ಅವರು, ಜಿಲ್ಲಾ ಬಿಜೆಪಿ ಯುವಮೋರ್ಚಾದಲ್ಲಿಯೂ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದರು.
ಈ ಹಿಂದೆ ಬಿಜೆಪಿ ಮಂಡಲ ಯುವಮೋರ್ಚಾದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಅವರು, ಪಕ್ಷದ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.
ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯರು ಸಂತಾಪ ವ್ಯಕ್ತಪಡಿಸಿದ್ದಾರೆ.























