ನಿಧನ

ಅಲಂಕಾರು ಬಳಿ ಥಾರ್-ಬೈಕ್ ಅಪಘಾತ: ಬೈಕ್ ಸವಾರ ಮೃತ್ಯು, ಚಾಲಕ ಪರಾರಿ!!

ಈ ಸುದ್ದಿಯನ್ನು ಶೇರ್ ಮಾಡಿ

ಅಲಂಕಾರು: ವೇಗವಾಗಿ ಬಂದ ಥಾರ್ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಅಲಂಕಾರು ಬಳಿ ನಡೆದಿದೆ.

ಮೃತರನ್ನು ಅಲಂಕಾರು ನಿವಾಸಿ ಲೋಕೇಶ್ ಗೌಡ ಎಂದು ಗುರುತಿಸಲಾಗಿದೆ.

ಅಪಘಾತದ ಬಳಿಕ ಥಾರ್ ಚಾಲಕ ವಾಹನವನ್ನು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಬಳಿಕ ಥಾರ್ ವಾಹನವು ಮನೆಯೊಂದರ ಬಳಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿ ಥಾರ್ ಚಾಲಕ ಸದ್ಯ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts