ನಿಧನ

ಕೆದಿಲದಲ್ಲಿ ವಿದ್ಯುತ್ ಸ್ಪರ್ಶಕ್ಕೆ ಲೈನ್‌ಮ್ಯಾನ್ ರವಿ ಗೌಡ ನಿಧನ!

ಈ ಸುದ್ದಿಯನ್ನು ಶೇರ್ ಮಾಡಿ

ಕೆದಿಲ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್‌ವೊಬ್ಬರು ಮೃತಪಟ್ಟ ಘಟನೆ ಕೆದಿಲ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಕೆಮ್ಮಾಯಿ ನಿವಾಸಿ ರವಿ ಗೌಡ ಎಂದು ಗುರುತಿಸಲಾಗಿದೆ. ಕೆದಿಲ ಹಾಗೂ ಪಾತ್ರಕೂಡಿ–ನಿತ್ತೂರು ಗಡಿಯಾರ ವ್ಯಾಪ್ತಿಯಲ್ಲಿ ಲೈನ್‌ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಗೌಡ ಅವರು, ವಿದ್ಯುತ್ ಸಮಸ್ಯೆ ಪರಿಹರಿಸುವ ಕಾರ್ಯದಲ್ಲಿ ತೊಡಗಿದ್ದ ವೇಳೆ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಅಕಾಲಿಕವಾಗಿ ನಿಧನ ಹೊಂದಿದ್ದಾರೆ.

gl

ವಿದ್ಯುತ್ ಸಮಸ್ಯೆಯ ಕುರಿತು ಕರೆ ಬಂದ ತಕ್ಷಣ ಸ್ಥಳಕ್ಕೆ ತೆರಳಿ ಸಮಸ್ಯೆ ಪರಿಹರಿಸುತ್ತಿದ್ದ ರವಿ ಗೌಡ ಅವರು, ಗ್ರಾಮಸ್ಥರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದ ಜನಪ್ರಿಯ ವ್ಯಕ್ತಿಯಾಗಿದ್ದರು. ಕರ್ತವ್ಯದ ಬಗ್ಗೆ ತೋರುತ್ತಿದ್ದ ಬದ್ಧತೆ ಹಾಗೂ ಸೇವಾ ಮನೋಭಾವದಿಂದಾಗಿ ಗ್ರಾಮಸ್ಥರ ಅಚ್ಚುಮೆಚ್ಚಿನವರಾಗಿದ್ದರು.

ರವಿ ಗೌಡ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ಕೆದಿಲ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ತೀವ್ರ ಶೋಕದ ವಾತಾವರಣ ನಿರ್ಮಾಣವಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts