ನಿಧನ

ಪುತ್ತೂರಿನ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಮಾಲಕ ಶ್ಯಾಮ ಭಟ್ ನಿಧನ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರಿನ ಪ್ರಸಿದ್ಧ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕರಾದ ಸರಾಫ್ ಮುಳಿಯ ಶ್ಯಾಮ ಭಟ್ (81) ಅವರು ಅಲ್ಪಕಾಲದ ಅಸೌಖ್ಯದಿಂದ ಅ.4ರಂದು ನಿಧನರಾಗಿದ್ದಾರೆ.

gl

ಪುತ್ತೂರಿನ ಪಾಂಗ್ಲಾಯಿಯಲ್ಲಿರುವ ತಮ್ಮ ನಿವಾಸ **‘ಶ್ಯಾಮಸುಲೋಚನಾ’**ದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಪುತ್ತೂರಿನಿಂದ ಆರಂಭಗೊಂಡು ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಪ್ರಸಿದ್ಧಿ ಪಡೆದಿರುವ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ಬೆಳವಣಿಗೆಯಲ್ಲಿ ಶ್ಯಾಮ ಭಟ್ ಅವರು ಮಹತ್ವದ ಪಾತ್ರ ವಹಿಸಿದ್ದರು. ಚಿನ್ನಾಭರಣ ವ್ಯವಹಾರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು, ಸಂಸ್ಥೆಯ ಅಭಿವೃದ್ಧಿಗೆ ಗಮನಾರ್ಹ ಕೊಡುಗೆ ನೀಡಿದ್ದರು.

ಶ್ಯಾಮ ಭಟ್ ಅವರ ನಿಧನಕ್ಕೆ ಕುಟುಂಬಸ್ಥರು, ಬಂಧು-ಬಳಗ, ಸ್ನೇಹಿತರು ಹಾಗೂ ಉದ್ಯಮ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮೃತರು ಪುತ್ರರಾದ ಕೇಶವ ಪ್ರಸಾದ್ ಮುಳಿಯ ಹಾಗೂ ಕೃಷ್ಣನಾರಾಯಣ ಮುಳಿಯ, ಪುತ್ರಿ ವಿದ್ಯಾಸರಸ್ವತಿ, ಅಳಿಯ ಶ್ಯಾಮಸುಂದರ್, ಸೊಸೆಯಂದಿರಾದ ಕೃಷ್ಣವೇಣಿ ಪ್ರಸಾದ್ ಮುಳಿಯ ಹಾಗೂ ಅಶ್ವಿನಿ ಕೃಷ್ಣ ಮುಳಿಯ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

ಅ.6ರಂದು ಮೃತರ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪುತ್ರರಾದ ಕೇಶವ ಪ್ರಸಾದ್ ಮುಳಿಯ ಹಾಗೂ ಕೃಷ್ಣನಾರಾಯಣ ಮುಳಿಯ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts