ಪುತ್ತೂರು: ಕಲ್ಲರ್ಪೆ ಬಳಿ ನಡೆದಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕುರಿಯ ಗ್ರಾಮದ ಮಲಾರು ನಿವಾಸಿ ಸುಂದರ ಆಚಾರ್ಯ (59 ವ.) ಅವರು ಇಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮರದ ಕೆಲಸ ಮಾಡಿಕೊಂಡಿದ್ದ ಇವರು ಕೆಲ ದಿನಗಳ ಹಿಂದೆ ಸಂಜೆ ವೇಳೆ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿ ಅಪಘಾತ ನಡೆದಿತ್ತು. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ ಶಶಿಕಲಾ, ಪುತ್ರರಾದ ಹರ್ಷಿತ್, ರಕ್ಷಿತ್, ಸಹೋದರರು, ಸಹೋದರಿಯರನ್ನು ಅಗಲಿದ್ದಾರೆ.

















