ನಿಧನ

ಪುತ್ತೂರು : ದ್ವಿಚಕ್ರ ವಾಹನನಕ್ಕೆ  ಪಿಕಪ್ ಡಿಕ್ಕಿ ಹೊಡೆದು ಪರಾರಿ! ನಿವೃತ್ತ ಶಿಕ್ಷಕ ಮೃತ್ಯು

GL
ಮುಕ್ರಂಪಾಡಿಯಲ್ಲಿ ದ್ವಿಚಕ್ರವಾಹನಕ್ಕೆ ಪಿಕಪ್ ಡಿಕ್ಕಿಹೊಡೆದು ಪರಾರಿಯಾದ ಘಟನೆ ನಡೆದಿದೆ. ದ್ವಿಚಕ್ರವಾಹನ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮುಕ್ರಂಪಾಡಿಯಲ್ಲಿ ದ್ವಿಚಕ್ರವಾಹನಕ್ಕೆ ಪಿಕಪ್ ಡಿಕ್ಕಿಹೊಡೆದು ಪರಾರಿಯಾದ ಘಟನೆ ನಡೆದಿದೆ. ದ್ವಿಚಕ್ರವಾಹನ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪಂಜ ಕೂತ್ಕುಂಜ ಗ್ರಾಮದ ಸಂಪ ನಿವಾಸಿ ನಿವೃತ್ತ ಶಿಕ್ಷಕ ಕೃಷ್ಣ ಭಟ್ ಮೃತಪಟ್ಟ ಬೈಕ್ ಸವಾರ. ಮೃತರು ತಾಯಿ, ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಕಾರ್ಯ ನಿಮಿತ್ತ ಕೃಷ್ಣ ಭಟ್ ಅವರು ಪಂಜದಿಂದ ಪುತ್ತೂರಿಗೆ ಬೈಕ್ ನಲ್ಲಿ  ಬರುತ್ತಿದ್ದ ವೇಳೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ, ಬೈಕ್ ನೊಂದಿಗೆ ನೆಲಕ್ಕೆ ಉರುಳಿ ಬಿದ್ದಿದ್ದು , ಇದನ್ನು ಗಮನಿಸಿಯೂ, ಯಾವುದೇ ಮಾನವೀಯತೆಯನ್ನೂ ತೋರಿಸದೆ. ಪಿಕಪ್ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.

ಸ್ಥಳದಲ್ಲಿ ಸೇರಿದವರು ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದು. ತಲೆಗೆ 

 ಗಾಯವಾದ ಹಿನ್ನಲೆಯಲ್ಲಿ ಮಂಗಳೂರಿಗೆ ಕರೆದೊಯ್ಯಲಾಗಿತ್ತು . ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿದ್ದಾರೆ.

ಪುತ್ತೂರು ಸಂಚಾರಿ ಠಾಣೆಗೆ ಆಸ್ಪತ್ರೆಯಿಂದ ಮಾಹಿತಿ ಬಾರದ ಕಾರಣದಿಂದ ಹಾಗೂ ದೂರು ನೀಡಲು ಯಾರೂ ಬರದ ಕಾರಣದಿಂದ ಇನ್ನೂ ಪ್ರಕರಣ ದಾಖಲಾಗಿಲ್ಲ


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts