tamanvi
ಕರಾವಳಿ

ಉಡುಪಿ: ಮೀನು ಕಳ್ಳತನ ಆರೋಪ; ಮರಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ.!!

ಮೀನುಗಾರಿಕಾ ಬೋಟ್‌ನಿಂದ ದುಬಾರಿ ಬೆಲೆಯ ಸಿಗಡಿ ಮೀನು ಕದ್ದಿರುವ ಆರೋಪದಲ್ಲಿ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಉಡುಪಿಯ ಮಲ್ಪೆ ಬಂದರಿನಲ್ಲಿ ನಡದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಮೀನುಗಾರಿಕಾ ಬೋಟ್‌ನಿಂದ ದುಬಾರಿ ಬೆಲೆಯ ಸಿಗಡಿ ಮೀನು ಕದ್ದಿರುವ ಆರೋಪದಲ್ಲಿ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಉಡುಪಿಯ ಮಲ್ಪೆ ಬಂದರಿನಲ್ಲಿ ನಡದಿದೆ.

ಸಿಗಡಿ ಮೀನುಗಳನ್ನು ಕದ್ದಿರುವ ಮಹಿಳೆಯನ್ನು ಮೊದಲಿಗೆ ಮೀನುಗಾರ ಮಹಿಳೆಯೊಬ್ಬರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಮಹಿಳೆಗೆ ಕಪಾಳಮೋಕ್ಷ ಮಾಡಿ ಕದ್ದ ಮೀನು ತೋರಿಸುವಂತೆ ಒತ್ತಾಯಿಸಿದ್ದಾರೆ. ಆದರೆ ತಾನು ಮೀನು ಕದ್ದಿಲ್ಲ ಅಂತ ವಾದ ಮಾಡಿದ ಆಕೆಯನ್ನು ಮರಕ್ಕೆ ಕಟ್ಟಿಹಾಕಿದ ಜನರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಈ ವೇಳೆ ಸಾರ್ವಜನಿಕರೂ ಕೂಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಇದಾದ ಬಳಿಕ ಮಲ್ಪೆ ಪೊಲೀಸರಿಗೆ ಮಾಹಿತಿ ನೀಡಿ ಮಹಿಳೆಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸ್‌ ಠಾಣೆಯಲ್ಲಿ ತಾನು ಕದ್ದಿರುವುದಾಗಿ ಒಪ್ಪಿಕೊಂಡ ಮಹಿಳೆ ಕದ್ದಿರುವ ಮೀನಿನ ಹಣ ನೀಡಿದ್ದಾರೆ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…