ಕರಾವಳಿಶಿಕ್ಷಣ

ಎಸೆಸ್ಸೆಲ್ಸಿ ಪರೀಕ್ಷೆ ಬರೆಯಲು ನಿರಾಕರಿಸಿದ ವಿದ್ಯಾಸಂಸ್ಥೆ: 4 ಪರೀಕ್ಷೆಗೆ ಗೈರು! ವಿದ್ಯಾರ್ಥಿನಿಯರ ಮನವೊಲಿಸಿ ಪರೀಕ್ಷೆ ಬರೆಸಿದ ಬಿಇಓ!

ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಸಾಲಿನ ಎಸೆಸ್ಸೆಲ್ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳಿಗೆ ಕಲಿಕೆಯಲ್ಲಿ ಹಿಂದುಳಿದಿದ್ದಾರೆಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂಬ ಪ್ರಕರಣದ ವಿದ್ಯಾರ್ಥಿನಿಯರು ಬುಧವಾರ ಪರೀಕ್ಷೆಗೆ ಹಾಜರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಸಾಲಿನ ಎಸೆಸ್ಸೆಲ್ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳಿಗೆ ಕಲಿಕೆಯಲ್ಲಿ ಹಿಂದುಳಿದಿದ್ದಾರೆಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂಬ ಪ್ರಕರಣದ ವಿದ್ಯಾರ್ಥಿನಿಯರು ಬುಧವಾರ ಪರೀಕ್ಷೆಗೆ ಹಾಜರಾಗಿದ್ದಾರೆ.

akshaya college

ಶೇಕಡಾ ನೂರು ಫಲಿತಾಂಶದ ಕಾರಣಕ್ಕೆ ಕಲಿಕೆಯಲ್ಲಿ ಹಿಂದುಳಿದಿರುವ ತಮಗೆ ಅವಕಾಶ ನಿರಾಕರಿಸ ಲಾಗಿದೆ ಎಂದು ದೂರು ನೀಡಿರುವ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ವಿದ್ಯಾರ್ಥಿನಿಯರಿಬ್ಬರಿಗೂ ಪ್ರವೇಶ ಪತ್ರವನ್ನು ಒದಗಿಸಿದ್ದರು. ಆ ಬಳಿಕವೂ ವಿದ್ಯಾರ್ಥಿ ನಿಯರು ಪರೀಕ್ಷೆ ಬರೆಯಲು ಹಿಂದೇಟು ಹಾಕಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಸತತ ಮನವೊಲಿಸಿ ಬುಧವಾರ ಪರೀಕ್ಷೆ ಬರೆಯಲು ವಿನಂತಿಸಲಾಗಿತ್ತು. ಅದರಂತೆ ಕರಾಯ ಪ್ರೌಢ ಶಾಲೆಯಲ್ಲಿ ನಡೆದ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿನಿಯರು ವಿಜ್ಞಾನ ಪರೀಕ್ಷೆಯನ್ನು ಬರೆದಿರುತ್ತಾರೆ. ಇನ್ನುಳಿದ ಒಂದು ಪರೀಕ್ಷೆಯನ್ನು ಬರೆದರೆ, ಈಗಾಗಲೇ ಪರೀಕ್ಷೆಗೆ ಹಾಜರಾಗದೆ ಉಳಿದ ನಾಲ್ಕು ಪರೀಕ್ಷೆಗಳನ್ನು ಮುಂದಿನ 2 ಹಂತಗಳಲ್ಲಿ ಬರೆಯಲು ಅವಕಾಶವಿರುತ್ತದೆ.

ಪ್ರಕರಣದ ಬಗ್ಗೆ ಬಂದ ದೂರನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ. ಇಬ್ಬರು ವಿದ್ಯಾರ್ಥಿನಿಯರು ಬುಧವಾರ ವಿಜ್ಞಾನ ವಿಷಯದ ಪರೀಕ್ಷೆಯನ್ನು ಬರೆದಿದ್ದು, ಉಳಿದ ಒಂದು ಪರೀಕ್ಷೆಯನ್ನು ಮೊದಲ ಹಂತದಲ್ಲಿ ಬರೆದರೆ, ಬರೆಯದೆ ಉಳಿದ ನಾಲ್ಕು ಪಠ್ಯಗಳ ಪರೀಕ್ಷೆಗಳನ್ನು ಎರಡನೇ ಹಂತದಲ್ಲಿ ಬರೆಯಬಹುದಾಗಿದೆ. ಅದೆರಡು ಹಂತಗಳಲ್ಲೂ ತೃಪ್ತಿಕರ ಅಂಕ ಬಾರದಿದ್ದರೆ ಮೂರನೇ ಹಂತದ ಪರೀಕ್ಷೆಯನ್ನು ಬರೆಯಲು ಅವಕಾಶವಿದೆ. ಒಟ್ಟಾರೆ ಪದ್ಮುಂಜ ಸರಕಾರಿ ಪ್ರೌಢ ಶಾಲೆಯ ಪರೀಕ್ಷೆ ಬರೆಯದ ಪ್ರಕರಣವು ಪ್ರಸಕ್ತ ತನಿಖಾ ಹಂತದಲ್ಲಿದೆ ಎಂದು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಶ್ವರಿ ಮಾಧ್ಯಮಕ್ಕೆ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಎರಡೇ ದಿನದಲ್ಲಿ ಬಯಲಾದ ರಸ್ತೆ ಕಾಮಗಾರಿಯ ಅಸಲಿ ಮುಖ | ಅವೈಜ್ಞಾನಿಕ, ಕಳಪೆ ರಸ್ತೆ ಕಾಮಗಾರಿ ವಿರುದ್ಧ ಪುತ್ತಿಲ ಆಕ್ರೋಶ

ಪುತ್ತೂರು: ಕಾಮಗಾರಿ ನಡೆದ ರಸ್ತೆ ವಾಹನ ಸಂಚಾರಕ್ಕೆ ತೆರೆದುಕೊಂಡ ಎರಡೇ ದಿನದಲ್ಲಿ ಕಿತ್ತು…

ಸೆ. 7 – 9: ಯುವಜನರ ನಡಿಗೆ ಉದ್ಯೋಗದ ಕಡೆಗೆ ಡಿವೈಎಫ್ಐನಿಂದ ಯುವಜನ ಜಾಥಾ | ಪುತ್ತೂರು ಸಹಿತ ಜಿಲ್ಲಾದ್ಯಂತ ಸಂಚರಿಸಲಿದೆ ಜಾಥಾ

ಪುತ್ತೂರು: ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಯುವಜನರ ನಡಿಗೆ ಉದ್ಯೋಗದ ಕಡೆಗೆ…