ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲೆ ಬಂದ್’ಗೆ ಕರೆ ನೀಡಲಾಗಿದೆ.
ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್ ಆಚರಿಸುವಂತೆ ಸಂಘಟನೆಗಳು ಮನವಿ ಮಾಡಿವೆ.
ಬೆಳಿಗ್ಗೆ 10.30ಕ್ಕೆ ಹತ್ಯೆಯಾದ ಸುಹಾಸ್ ಶೆಟ್ಟಿ ಅವರ ಅಂತಿಮ ಯಾತ್ರೆ ಎಜೆ ಆಸ್ಪತ್ರೆಯಿಂದ ಕಾರಿಂಜದವರೆಗೆ ನಡೆಯಲಿದೆ ಎಂದು ಹೇಳಲಾಗಿದೆ.