Gl
ಕರಾವಳಿ

ಕುಡಿದ ಮತ್ತು ತಂದ ಆಪತ್ತು! ಸ್ವತಃ ತನ್ನ ಮನೆಗೆ ಬೆಂಕಿ ಹಚ್ಚಿದ ಮದ್ಯ ವ್ಯಸನಿ!!

ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ತನ್ನದೇ ಮನೆಗೆ ಬೆಂಕಿ ಹಚ್ಚಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ತನ್ನದೇ ಮನೆಗೆ ಬೆಂಕಿ ಹಚ್ಚಿದ ಘಟನೆ ಉಡುಪಿಯಲ್ಲಿ ನಡೆದಿದೆ.

Pashupathi

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಗಲಾಟೆ ಮಾಡಿ ಉಗ್ರ ವರ್ತನೆ ತೋರಿದ್ದರಿಂದ ಆತನ ಕುಟುಂಬ ಸದಸ್ಯರು ಭಯಭೀತರಾಗಿದ್ದರು ಎನ್ನಲಾಗಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗದ ಕುಟುಂಬ ಸದಸ್ಯರು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ಸಹಾಯ ಕೋರಿದರು. ತಕ್ಷಣ ಸ್ಪಂದಿಸಿದ ನಿತ್ಯಾನಂದ ಒಳಕಾಡು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳಕ್ಕೆ ಬೆಂಕಿಯ ಬಗ್ಗೆ ಮಾಹಿತಿ ನೀಡಿದ್ದಾರೆ.

akshaya college

ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಭಾರೀ ಅಗ್ನಿ ದುರಂತವೊಂದು ತಪ್ಪಿದಂತಾಗಿದೆ.

ಘಟನೆಯ ನಂತರ, ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಕುಡಿದಿದ್ದ ವ್ಯಕ್ತಿಯನ್ನು ಸಮಾಧಾನಪಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ವ್ಯಸನ ಮುಕ್ತಿ ಕೇಂದ್ರಕ್ಕೆ ದಾಖಲಿಸಿದ್ದಾರೆ ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕರಾವಳಿಗೆ ವಿಶೇಷ ಕಾರ್ಯಪಡೆ: ಉದ್ಘಾಟಿಸಿದ ಗೃಹ ಸಚಿವ! ಕೋಮು ಸಂಘರ್ಷ ತಡೆಯಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ ರಚಿಸಿದ ಸರಕಾರ!

ಮಂಗಳೂರು: ಕರಾವಳಿಯಲ್ಲಿ ಕೋಮು ಸಂಘರ್ಷ ತಡೆಯುವ ನಿಟ್ಟಿನಲ್ಲಿ ರಚಿಸಲಾದ ವಿಶೇಷ ಕಾರ್ಯ ಪಡೆ…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…