ಕರಾವಳಿ

ಧರ್ಮಸ್ಥಳ ತಲುಪಿದ ಆಕಾಂಕ್ಷಾ ಮೃತದೇಹ! ಪಂಜಾಬ್ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಏರೋಸ್ಪೇಸ್ ಉದ್ಯೋಗಿನಿ!

tv clinic
ಪಂಜಾಬ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಧರ್ಮಸ್ಥಳ ಬೊಳಿಯಾರ್ ನಿವಾಸಿ, ಏರೋಸ್ಪೇಸ್ ಉದ್ಯೋಗಿಯಾಗಿದ್ದ ಆಕಾಂಕ್ಷಾ ಎಸ್. ನಾಯರ್ (22) ಅವರ ಮೃತದೇಹ ಬುಧವಾರ ಬೆಳಗ್ಗೆ ಮನೆಗೆ ತಲುಪಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಪಂಜಾಬ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಧರ್ಮಸ್ಥಳ ಬೊಳಿಯಾರ್ ನಿವಾಸಿ, ಏರೋಸ್ಪೇಸ್ ಉದ್ಯೋಗಿಯಾಗಿದ್ದ ಆಕಾಂಕ್ಷಾ ಎಸ್. ನಾಯರ್ (22) ಅವರ ಮೃತದೇಹ ಬುಧವಾರ ಬೆಳಗ್ಗೆ ಮನೆಗೆ ತಲುಪಿದೆ.

core technologies

ಆಕಾಂಕ್ಷಾ ಮೃತದೇಹ ಬೆಂಗಳೂರು ವಿಮಾನ ನಿಲ್ದಾಣದಿಂದ ಆಂಬುಲೆನ್ಸ್ ಮೂಲಕ ಧರ್ಮಸ್ಥಳದ ಬೊಳಿಯರ್ ಗೆ ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ತರಲಾಯಿತು.

akshaya college

ಮನೆಯಲ್ಲಿ ತಂದೆ ತಾಯಿಯರ ಆಕ್ರಂದನ ಮುಗಿಲು ಮುಟ್ಟಿದ್ದು ನೂರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಧರ್ಮಸ್ಥಳ ಬೊಳಿಯಾರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂದೇವಿ ದಂಪತಿಯ ಎರಡನೇ ಪುತ್ರಿ ದಿಲ್ಲಿಯಲ್ಲಿ ಏರೋಸ್ಪೇಸ್ ಉದ್ಯೋಗಿಯಾಗಿದ್ದರು. ವಿದೇಶಕ್ಕೆ ಉದ್ಯೋಗಕ್ಕೆ ತೆರಳುವ ಇರಾದೆ ಹೊಂದಿದ್ದ ಆಕಾಂಕ್ಷಾ ಸರ್ಟಿಫಿಕೆಟ್ ಗಳನ್ನು ಪಡೆಯುವುದಕ್ಕಾಗಿ ತಾನು ಕಲಿತ ಪಂಜಾಬಿನ ಎಲ್.ಪಿ. ವಿಶ್ವವಿದ್ಯಾನಿಲಯಕ್ಕೆ ತೆರಳಿದ್ದರು. ಅಲ್ಲಿ ಮೇ 17ರಂದು ಕಾಲೇಜು ಕಟ್ಟಡದ 4ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪಂಜಾಬಿಗೆ ತೆರಳಿದ್ದ ಮೃತಳ ಹೆತ್ತವರು ಮಗಳ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದರು. ಅದರಂತೆ ಪಂಜಾಬ್ ಪೊಲೀಸರು ಎಲ್.ಪಿ.ಯು ಪ್ರಾಧ್ಯಾಪಕ ಕೇರಳ ಮೂಲದ ಬಿಜಿಲ್ ಮ್ಯಾಥ್ಯೂ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ!

ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ…

ಅ. 26: ದ.ಕ. ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘದಿಂದ ಪುತ್ತೂರಿನಲ್ಲಿ ಗಾಣಿಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಪೆರ್ಣೆ…